HEALTH TIPS

ಹೊಸ ವಾಯುಭಾರ ಕುಸಿತ: ಮುಂದಿನ 5 ದಿನ ಭಾರೀ ಮಳೆ; ಪ್ರಬಲ ಗಾಳಿಯ ಸಾಧ್ಯತೆ; ಎಚ್ಚರಿಕೆ

               ತಿರುವನಂತಪುರ: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಕೇರಳದ ಕರಾವಳಿಯಿಂದ ಗುಜರಾತ್ ಕರಾವಳಿಯವರೆಗೆ ಹೊಸ ವಾಯುಭಾರ ಕುಸಿತ ಅಪ್ಪಳಿಸಲಿದೆ. ಕಡಿಮೆ ಒತ್ತಡದ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

                ಆಗಸ್ಟ್ 2 ರವರೆಗೆ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಎಚ್ಚರಿಕೆಯನ್ನು ನೀಡಿದೆ. ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

               ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಮಲಪ್ಪುರಂ, ಕೋಝಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಶುಕ್ರವಾರ   ಕೋಝಿಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ.

                ರಾಷ್ಟ್ರೀಯ ಸಾಗರ ಸಮೀಕ್ಷೆ ಮತ್ತು ಸಂಶೋಧನಾ ಕೇಂದ್ರದ ಪ್ರಕಾರ ಇಂದು ರಾತ್ರಿ 11.30ರವರೆಗೆ ಕೇರಳ ಕರಾವಳಿಯಲ್ಲಿ 1.9 ರಿಂದ 2.7 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ. ತಮಿಳುನಾಡು ಕರಾವಳಿಯಲ್ಲಿ ಎತ್ತರದ ಅಲೆಗಳು ಮತ್ತು ಪ್ರಕ್ಷÄಬ್ದ ಸಮುದ್ರದ ವಿದ್ಯಮಾನದ ಎಚ್ಚರಿಕೆ ನೀಡಲಾಗಿದೆ. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries