ತಿರುವನಂತಪುರ: ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲಲ್ಲಿ ಭಾರೀ ಮಳೆ ಸಾಧ್ಯತೆ ಇದೆ.
ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾನುವಾರವೂ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.
ಪ್ರಸ್ತುತ ಯಾವುದೇ ತೀವ್ರ ಮಳೆಯ ಎಚ್ಚರಿಕೆಗಳಿಲ್ಲ. ಆದರೆ ಈ ದಿನಗಳಲ್ಲಿ ಎಚ್ಚರಿಕೆ ಮರೆಯಬಾರದು ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಅತಿವೃಷ್ಟಿ ಅನುಭವಿಸಿರುವ ಪ್ರದೇಶಗಳಲ್ಲಿ ತೀವ್ರ ಎಚ್ಚರಿಕೆ ವಹಿಸಬೇಕು. ಭೂಕುಸಿತ, ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳಿಂದ ದೂರವಿರಲು ಜನರಿಗೆ ಎಚ್ಚರಿಕೆ ನೀಡಲಾಗಿದೆ ಮತ್ತು ಜನರು ನದಿ ದಡ ಮತ್ತು ಅಣೆಕಟ್ಟುಗಳ ಕೆಳಗಿನ ಪ್ರದೇಶಗಳಿಂದ ದೂರ ತೆರಳಲು ಮುತುವರ್ಜಿವಹಿಸಬೇಕು.