ಗುವಾಹಟಿ: ಜನಾಂಗೀಯ ಸಂಘರ್ಷ ಪೀಡಿತ ರಾಜ್ಯ ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುರುವಾರ ಅಶ್ರುವಾಯು ಶೆಲ್ ದಾಳಿ ನಡೆಸಿದ್ದಾರೆ. ಇದರಿಂದ ಮೈತೇಯಿ ಸಮುದಾಯಕ್ಕೆ ಸೇರಿದ ಎಂಟು ಜನರು ಮತ್ತು ವಿಡಿಯೊ ಪತ್ರಕರ್ತರೊಬ್ಬರು ಗಾಯಗೊಂಡಿದ್ದಾರೆ.

ಇಂಫಾಲ್‌ನ ಅಖಂಪತ್ ಪ್ರದೇಶದಲ್ಲಿನ ಪರಿಹಾರ ಶಿಬಿರದ ಕಡೆಯಿಂದ ಪ್ರತಿಭಟನಾ ಮೆರವಣಿಗೆ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಅಧಿಕೃತ ನಿವಾಸದ ಕಡೆಗೆ ಸಾಗಿದಾಗ, ಪೊಲೀಸರು ಅಶ್ರುವಾಯು ಶೆಲ್ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಶಾಂತಿ ಮರುಸ್ಥಾಪನೆಗೆ ಒತ್ತಾಯಿಸಿದ ಪ್ರತಿಭಟನಕಾರರು, ತೆಂಗ್‌ನೌಪಾಲ್ ಮತ್ತು ಚುರಾಚಂದಪುರ ಜಿಲ್ಲೆಯ ಕುಕಿ ಪ್ರಾಬಲ್ಯದ ಪ್ರದೇಶದಲ್ಲಿನ ತಮ್ಮ ನಿವಾಸಗಳಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದರು. ಕಳೆದ ವರ್ಷದ ಮೇ 3ರಂದು ಹಿಂಸಾಚಾರ ಭುಗಿಲೆದ್ದ ಬಳಿಕ, ಆ ಪ್ರದೇಶಗಳಲ್ಲಿನ ಜನರು ಮೈತೇಯಿ ಪ್ರಾಬಲ್ಯದ ಇಂಫಾಲ್‌ನಲ್ಲಿ ಆಶ್ರಯ ಪಡೆದಿದ್ದಾರೆ.
ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ 226 ಜನರು ಮೃತಪಟ್ಟಿದ್ದು, 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.