HEALTH TIPS

Bangla Unrest: ಭಾರತಕ್ಕೆ ಮರಳಿದವರ ಬಗ್ಗೆ ರಾಜ್ಯಸಭೆಗೆ ಸರ್ಕಾರ ಮಾಹಿತಿ

 

ವದೆಹಲಿ: ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಉಂಟಾದ ನಂತರ ಅಲ್ಲಿಂದ 7,200 ಭಾರತೀಯರು ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಈ ಮಾಹಿತಿ ನೀಡಿದ್ದಾರೆ.

ವಿದೇಶಾಂಗ ಇಲಾಖೆ ದಾಖಲೆಗಳ ಪ್ರಕಾರ 19.000 ಭಾರತೀಯರು ಬಾಂಗ್ಲಾದೇಶದಲ್ಲಿ ಇದ್ದರು. ಅದರಲ್ಲಿ 9000 ವಿದ್ಯಾರ್ಥಿಗಳೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಭಾರತಕ್ಕೆ ಬರಲು ಬಯಸುವವರನ್ನು ಹಾಗೂ ಸಂಕಷ್ಟದಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಸರ್ಕಾರ ಸಿದ್ದವಿದೆ ಎಂದು ತಿಳಿಸಿದ್ದಾರೆ.

ಉದ್ಯೋಗದಲ್ಲಿ ಮೀಸಲು ಕೋಟಾ ವಿರೋಧಿಸಿ ವಿದ್ಯಾರ್ಥಿ ಸಮುದಾಯದ ಪ್ರತಿಭಟನೆಯಿಂದಾಗಿ ಬಾಂಗ್ಲಾದಲ್ಲಿ ಅರಾಜಕತೆ ನಿರ್ಮಾಣವಾಗಿತ್ತು. ಇದರ ಪರಿಣಾಮ ಶೇಖ್‌ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ದೇಶದಿಂದಲೇ ಪಲಾಯನ ಮಾಡಿದ್ದರು.

ಹಿಂಸಾಚಾರದಲ್ಲಿ ಇದುವರೆಗೆ 560 ಮಂದಿ ಮೃತಪಟ್ಟಿದ್ದಾರೆ. ಹಸೀನಾ ನೇತೃತ್ವದ ಸರ್ಕಾರ ಪತನದ ಬಳಿಕವೂ ದೇಶದಾದ್ಯಂತ ಭುಗಿಲೆದ್ದ ಹಿಂಸಾಚಾರದಲ್ಲಿ 232 ಮಂದಿ ಮೃತಪಟ್ಟಿದ್ದಾರೆ.

ಆಶ್ರಯ ಕೋರಿ ಭಾರತಕ್ಕೆ ವಲಸೆ

ಇನ್ನೊಂದೆಡೆ ಬಾಂಗ್ಲಾದೇಶದ ನೂರಾರು ನಾಗರಿಕರು ಆಶ್ರಯ ಕೋರಿ ಭಾರತಕ್ಕೆ ವಲಸೆ ಬರಲು ಸಿದ್ಧರಾಗಿದ್ದು, ಪಶ್ಚಿಮ ಬಂಗಾಳ ಜಿಲ್ಲೆಯ ಜಲಪಾಯಿಗುರಿ ಜಿಲ್ಲೆಗೆ ಹೊಂದಿಕೊಂಡಿರುವ ಭಾರತ-ಬಾಂಗ್ಲಾದ ಗಡಿಯಲ್ಲಿ ಗುಂಪುಗೂಡುತ್ತಿದ್ದಾರೆ.

ಝಾಪೋರ್ತಾಲಾ ಗಡಿ ಉಪಠಾಣೆ ವ್ಯಾಪ್ತಿಯಲ್ಲಿ ದಕ್ಷಿಣ ಬೆರುಬರಿ ಗ್ರಾಮದ ಬಳಿ ಅವರು ಗುಂಪು ಸೇರಿದ್ದರು. ದೇಶದಲ್ಲಿ ನಮ್ಮ ಮೇಲೆ ಹಲ್ಲೆ ನಡೆಯುವ ಸಾಧ್ಯತೆಗಳಿವೆ ಎಂದು ಈ ನಿವಾಸಿಗಳು ಕಾರಣ ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries