ನವದೆಹಲಿ: ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನವದೆಹಲಿ: ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಒಡಿಶಾದಲ್ಲಿ ಬಂದ್ ಬಿಸಿ ಕೊಂಚ ತಟ್ಟಿದ್ದು, ಕೆಲವು ರೈಲು ಮತ್ತು ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಉಳಿದಂತೆ ಬ್ಯಾಂಕ್, ಸರ್ಕಾರಿ ಕಚೇರಿ, ವಾಣಿಜ್ಯ ಮಳಿಗೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಅದಾಗ್ಯೂ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.
ಉಳಿದಂತೆ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ, ದೆಹಲಿ ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನ್ಯಾಯ ಮತ್ತು ಸಮಾನತೆ ಒದಗಿಸುವುದೂ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟವು (ಎನ್‌ಎಸಿಡಿಎಒಆರ್) ಸರ್ಕಾರದ ಮುಂದಿಟ್ಟಿದೆ.