ತಿರುವನಂತಪುರಂ: ಉತ್ತರ ಕೇರಳದಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಡುಕ್ಕಿ, ಕೋಝಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಮತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುರುವಾರ ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಶುಕ್ರವಾರ ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇರಳ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ. ಈ ತಿಂಗಳ ಅಂತ್ಯದವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.