ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು ಯುದ್ಧ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆ ಏರ್ ಇಂಡಿಯಾ ಸಂಸ್ಥೆ ಆಗಸ್ಟ್ 8ರವರೆಗೆ ಟೆಲ್ ಅವೀವ್‌ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ.
ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು ಯುದ್ಧ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆ ಏರ್ ಇಂಡಿಯಾ ಸಂಸ್ಥೆ ಆಗಸ್ಟ್ 8ರವರೆಗೆ ಟೆಲ್ ಅವೀವ್‌ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ.
ದೆಹಲಿಯಿಂದ ಇಸ್ರೇಲ್‌ಗೆ ವಾರಕ್ಕೆ ನಾಲ್ಕು ದಿನಗಳ ಕಾಲ ಟಾಟಾ ಸಂಸ್ಥೆ ಒಡೆತನದ ಏರ್ ಇಂಡಿಯಾ ಕಾರ್ಯಾಚರಣೆ ನಡೆಸುತ್ತಿತ್ತು.
'ಮಧ್ಯಪ್ರಾಚ್ಯ ದೇಶದಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆ ತಕ್ಷಣಕ್ಕೆ ಜಾರಿಗೆ ಬರುವಂತೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಆಗಸ್ಟ್ 8ರವರೆಗೆ ಇಸ್ರೇಲ್‌ಗೆ ವಿಮಾನ ಸೇವೆ ಇರುವುದಿಲ್ಲ. ಅಲ್ಲಿಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ' ಎಂದು ಏರ್ ಇಂಡಿಯಾ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
'ಈ ಸಂದರ್ಭದಲ್ಲಿ ಟೆಲ್ ಅವೀವ್‌ಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳಿಗೆ ಟಿಕೆಟ್ ಬುಕಿಂಗ್ ಮಾಡಿದ ಪ್ರಯಾಣಿಕರಿಗೆ ನೆರವಾಗುತ್ತೇವೆ. ಪ್ರಯಾಣವನ್ನು ಮರು ನಿಗದಿ ಮಾಡಿದಾಗ ಒಂದು ಬಾರಿಗೆ ಅನ್ವಯಿಸುವಂತೆ ಹಣವನ್ನು ಹಿಂದಿರುಗಿಸಲಾಗುವುದು' ಎಂದು ಹೇಳಿದೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ಇಸ್ರೇಲ್ -ಹಮಾಸ್ ಯುದ್ಧ ಸೇರಿದಂತೆ ಹಲವು ಗುಂಪುಗಳ ನಡುವೆ ನಡೆಯುತ್ತಿರುವ ಗಲಾಟೆಗಳು ಯುದ್ಧದ ಆತಂಕವನ್ನು ಹೆಚ್ಚಿಸಿದೆ.