ಎರ್ನಾಕುಳಂ: ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಅನಾಹುತಗಳ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ ಸಭೆ ನಡೆಸಿದೆ.
ರಾಜ್ಯ ಪೋಲೀಸ್ ಮುಖ್ಯಸ್ಥ ಡಾ. ಶೇಖ್ ದರ್ವೇಶ್ ಸಾಹಿಬ್ ಅವರ ಅಧ್ಯಕ್ಷತೆಯಲ್ಲಿ ಪೆÇಲೀಸ್ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಿತು.
ಎಲ್ಲ ಪ್ರಮುಖ ಪ್ರಕರಣಗಳನ್ನು ಹಿರಿಯ ಮಹಿಳಾ ಅಧಿಕಾರಿಗಳ ನೇತೃತ್ವದ ತಂಡ ತನಿಖೆ ನಡೆಸಲಿದೆ. ತನಿಖಾ ತಂಡಕ್ಕೆ ಹೆಚ್ಚಿನ ಮಹಿಳಾ ಅಧಿಕಾರಿಗಳನ್ನು ಸೇರಿಸಲು ನಿರ್ಧರಿಸಲಾಗಿದೆ. ಸ್ಥಳೀಯ ಪೋಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಲು ಸಭೆ ನಿರ್ಧರಿಸಿತು.
ವಿಶೇಷ ತನಿಖಾ ತಂಡದ ಅಧಿಕಾರಿಗಳಲ್ಲದೆ ಇತರ ಹಿರಿಯ ಐಪಿಎಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ನಿರ್ದೇಶಕ ರಂಜಿತ್ ವಿರುದ್ಧ ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಅವರ ದೂರನ್ನು ಸಹ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗುವುದು ಎಂದು ನಗರ ಪೆÇಲೀಸ್ ಆಯುಕ್ತ ಶ್ಯಾಮ್ ಸುಂದರ್ ಮಾಹಿತಿ ನೀಡಿದ್ದಾರೆ.