HEALTH TIPS

ಜೀವ ಕೈಯಲ್ಲಿಡಿದುಕೊಂಡು ಕಾಯುತ್ತಿದ್ದ ನಾಲ್ವರನ್ನು ರಕ್ಷಿಸಿದ ಸೇನೆ

       ಯನಾಡು: ಭೂಕುಸಿತ ಸಂಭವಿಸಿರುವ ಕೇರಳದ ವಯನಾಡು ಜಿಲ್ಲೆಯಲ್ಲಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ.

         ಈ ಪ್ರದೇಶದ ಪದವೆಟ್ಟಿ ಕುನ್ನು ಬಳಿ ಸಿಲುಕಿಕೊಂಡು ರಕ್ಷಣೆಗಾಗಿ ಕಾಯುತ್ತಿದ್ದ ನಾಲ್ವರನ್ನು ಭಾರತೀಯ ಸೇನೆ ರಕ್ಷಿಸಿದೆ. ಈ ಪೈಕಿ ಇಬ್ಬರು ಪುರುಷರು ಮತ್ತು ಇಬ್ನರು ಮಹಿಳೆಯರಿದ್ದಾರೆ.

ಭೂಕುಸಿತದಿಂದ ಮನೆಗೆ ಸಂಪರ್ಕ ಕಡಿತಗೊಂಡಿದ್ದರಿಂದ ಒಂದೇ ಕುಟುಂಬದ ನಾಲ್ವರು ಜೀವ ಕೈಯಲ್ಲಿಡಿದುಕೊಂಡು ರಕ್ಷಣೆಗಾಗಿ ಕಾಯುತ್ತಿದ್ದರು. ಕುಟುಂಬವನ್ನು ವಾಯುಮಾರ್ಗದ ಮೂಲಕ ಕರೆತರಲಾಗುವುದು ಎಂದು ರಕ್ಷಣಾ ಇಲಾಖೆಯ ಪಿಆರ್‌ಒ ತಿಳಿಸಿದ್ದಾರೆ.

           ಮನೆಯಲ್ಲಿ ಸಿಲುಕಿದ್ದವರ ಬಗ್ಗೆ ಅವರ ಸಂಬಂಧಿಕರು ಮಾಹಿತಿ ನೀಡಿದ ಬಳಿಕ ರಕ್ಷಣಾ ಕಾರ್ಯಾಚರಣೆಯ ತಂಡ ಅಲ್ಲಿಗೆ ತಲುಪಿತ್ತು ಎಂದು ಮೂಲಗಳು ತಿಳಿಸಿವೆ.

            ಭೂಕುಸಿತದಲ್ಲಿ ಅವರ ಮನೆಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ನಾಲ್ವರಿಗೂ ಯಾವುದೇ ತೊಂದರೆ ಆಗದಂತೆ ಅತ್ಯಂತ ಕಾಳಜಿ ವಹಿಸಿ ಕಾರ್ಯಾಚರಣೆ ನಡೆಸಲಾಗಿದೆ. ತುರ್ತು ಸ್ಥಳಾಂತರಕ್ಕಾಗಿ ಅತ್ಯಾಧುನಿಕ ಲಘು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ.

ದುರಾದೃಷ್ಟವಶಾತ್, ರಕ್ಷಿಸಲಾದ ಒಬ್ಬ ಮಹಿಳೆಗೆ ಕಾಲಿನ ಸಮಸ್ಯೆ ಎದುರಾಗಿದ್ದು, ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

               ಮುಂಡಕ್ಕೈನಲ್ಲಿ ಮಳೆ ನಡುವೆಯೇ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈಗಲೂ ಸುಮಾರು 300 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಹೇಳಿದ್ದಾರೆ.

          ಈಗಾಗಲೇ ಮೃತರ ಸಂಖ್ಯೆ 300ರ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

                ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿರುವ ಕುಮಾರ್ ಮಾಧ್ಯಮಗಳ ಜೊತ ಪ್ರತಿಕ್ರಿಯಿಸಿ, ಸುಮಾರು 300 ಮಂದಿ ಇನ್ನೂ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ. ಇನ್ನು ಎರಡು ಮೂರು ದಿನಗಳಲ್ಲಿ ಕಂದಾಯ ಇಲಾಖೆ ಈ ಕುರಿತ ಖಚಿತ ಸಂಖ್ಯೆಯನ್ನು ತಿಳಿಸಲಿದೆ ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries