ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನಡೆಯಲಿರುವ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
ಶ್ರೀ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಶೆಣೈ ಬದಿಯಡ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿದ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು ಆಶೀರ್ವಚನ ನೀಡಿ, ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವದಂತಹ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು. ಆ ಮೂಲಕ ಕ್ಷೇತ್ರದ ಸಾನಿಧ್ಯವೃದ್ಧಿ, ಗ್ರಾಮದ ಅಭಿವೃದ್ಧಿ ಅದರೊಂದಿಗೆ ಪ್ರತಿಯೊಬ್ಬರಿಗೂ ಅದರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಇದು ಇಡೀ ಸಮಾಜದ ಉನ್ನತಿಗೆ ಕಾರಣವಾಗುತ್ತದೆ. ಪ್ರತಿಯೊಬ್ಬರ ಸಮರ್ಪಣೆಯ ಫಲವಾಗಿ ಪೂರ್ಣಫಲದೊಂದಿಗೆ ನಂಬಿದವರಿಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂದರು.
ನಿಧಿ ಸಂಗ್ರಹಕ್ಕೆ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜಿ.ಶರ್ಮಾ ಕೋಳಿಕ್ಕಜೆ ಚಾಲನೆ ನೀಡಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಮಜೆಕ್ಕಾರ್, ನಾರಂಪಾಡಿ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ತಲೇಕ ಸುಬ್ರಹ್ಮಣ್ಯ ಭಟ್, ಹಣಕಾಸು ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಮೊಟ್ಟೆಕುಂಜ, ಪ್ರಧಾನ ಸಂಚಾಲಕ ಹರಿನಾರಾಯಣ ಶಿರಂತ್ತಡ್ಕ, ಉಬ್ರಂಗಳ ಶ್ರೀ ಮಹಾದೇವ ಕ್ಷೇತ್ರದ ಆಡಳಿತ ಸಮಿತಿ ಕಾರ್ಯದರ್ಶಿ ಕಿರಣ್ ಕುಣಿಕುಳ್ಳಾಯ, ಶ್ರೀಕ್ಷೇತ್ರದ ಅರ್ಚಕ ಶಂಕರನಾರಾಯಣ ಕೆದಿಲಾಯ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸೀತಾರಾಮ ಕುಂಜತ್ತಾಯ, ಕುಂಞÂರಾಮ ಗೋಸಾಡ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬ್ರಹ್ಮಕಲಶ ಸಮಿತಿ ಸದಸ್ಯರು, ವಿವಿಧ ಉಪಸಮಿತಿಗಳ ಪದಾ„ಕಾರಿಗಳು, ಸೇವಾ ಸಮಿತಿ ಸದಸ್ಯರು, ಭಕ್ತರು ನಿಧಿ ಸಂಗ್ರಹದಲ್ಲಿ ಪಾಲ್ಗೊಂಡರು.
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ತರ್ ನಾರಂಪಾಡಿ ಸ್ವಾಗತಿಸಿ, ಕಾರ್ಯದರ್ಶಿ ಹರೀಶ್ ನಾರಂಪಾಡಿ ವಂದಿಸಿದರು. ರವೀಂದ್ರ ಶೆಟ್ಟಿ ಗೋಸಾಡ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಬಲಿವಾಡು ಕೂಟ ನಡೆಯಿತು.
ಚಿತ್ರ:11ಕೆಎಸ್‍ನಾರಂಪಾಡಿ- ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರವನ್ನು ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು ಬಿಡುಗಡೆಗೊಳಿಸಿದರು.