HEALTH TIPS

ಭಾರೀ ಮಳೆ: ಕಾಸರಗೋಡು ಸಹಿತ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ: ಭೂಕುಸಿತದ ಅಪಾಯ

                 ತಿರುವನಂತಪುರ: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶುಕ್ರವಾರ (02.08.24) 6 ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

                     ವೃತ್ತಿಪರ ಕಾಲೇಜುಗಳು, ಟ್ಯೂಷನ್ ಸೆಂಟರ್ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

                 ಕಣ್ಣೂರು, ಕಾಸರಗೋಡು, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ . ಈ ಹಿಂದೆ ನಿಗದಿಯಾಗಿದ್ದ ಸಾರ್ವಜನಿಕ ಪರೀಕ್ಷೆಗಳು, ವಿಶ್ವವಿದ್ಯಾಲಯದ ಪರೀಕ್ಷೆಗಳು ಮತ್ತು ಸಂದರ್ಶನಗಳಿಗೆ ಯಾವುದೇ ಬದಲಾವಣೆ ಇರುವುದಿಲ್ಲ.

                 ಕೋಝಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ  ಅಲರ್ಟ್ ಘೋಷಿಸಲಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರ ಕಣ್ಣೂರು ಮತ್ತು ಕೋಝಿಕ್ಕೋಡ್ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ, ಗಾಳಿ, ಜಲಾವೃತ ಮತ್ತು ಪ್ರವಾಹದ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಭೂಕುಸಿತದ ಎಚ್ಚರಿಕೆಯೂ ಇದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries