HEALTH TIPS

'ಲ್ಯಾಟರಲ್‌ ಎಂಟ್ರಿ' ವಿಷಯದಲ್ಲಿ ಕಾಂಗ್ರೆಸ್ ಬೂಟಾಟಿಕೆ ಬಹಿರಂಗ: ಸಚಿವ ವೈಷ್ಣವ್

 ವದೆಹಲಿ: ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು 'ಲ್ಯಾಟರಲ್‌ ಎಂಟ್ರಿ' ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಿಡಿಕಾರಿದ್ದಾರೆ.

ಈ ಕುರಿತು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿರುವ ಅವರು, 'ಲ್ಯಾಟರಲ್ ಎಂಟ್ರಿ ವಿಷಯದಲ್ಲಿ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗವಾಗಿದೆ.


ಆಡಳಿತ ಸುಧಾರಣಾ ಆಯೋಗದ ಅಡಿಯಲ್ಲಿ (ಎಆರ್‌ಸಿ) 2005ರಲ್ಲಿ ಯುಪಿಎ ಸರ್ಕಾರವೇ ಲ್ಯಾಟರಲ್ ಎಂಟ್ರಿ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ವೀರಪ್ಪ ಮೊಯ್ಲಿ ಅವರು ಅಧ್ಯಕ್ಷರಾಗಿದ್ದರು. ಯುಪಿಎ ಅವಧಿಯಲ್ಲಿ ಎಆರ್‌ಸಿ ಹೊರಡಿಸಿದ್ದ ಶಿಫಾರಸುಗಳನ್ನು ಪಾರದರ್ಶಕವಾಗಿ ಮತ್ತು ನ್ಯಾಯಯುತವಾಗಿ ಕಾರ್ಯಗತಗೊಳಿಸಲು ಎನ್‌ಡಿಎ ಸರ್ಕಾರವು ಮುಂದಾಗಿದೆ' ಎಂದು ತಿಳಿಸಿದ್ದಾರೆ.

ಆಡಳಿತ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಲು ಪ್ರಧಾನಿ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಖಾಸಗಿ ಕ್ಷೇತ್ರದ 45 ಪರಿಣತರು ಶೀಘ್ರದಲ್ಲೇ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಹುದ್ದೆಗಳಿಗೆ ಸೇರಲಿದ್ದಾರೆ.

45 ಹುದ್ದೆಗಳಿಗೆ ನೇಮಕಾತಿ ಸಂಬಂಧ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಈಚೆಗೆ ಜಾಹೀರಾತು ಪ್ರಕಟಿಸಿದೆ. 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು/ಉಪಕಾರ್ಯದರ್ಶಿ ಹುದ್ದೆಗಳನ್ನು ಪರಿಣತರ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಸಾಮಾನ್ಯವಾಗಿ ಈ ಹುದ್ದೆಗಳಿಗೆ ಅಖಿಲ ಭಾರತ ಸೇವೆಗಳ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್‌) ಹಾಗೂ ಮತ್ತು ಇತರ 'ಎ'ದರ್ಜೆ ಸೇವೆಗಳ ಅಧಿಕಾರಿಗಳು ಇಂತಹ ಪ್ರಮುಖ ಹುದ್ದೆಗಳನ್ನು ನಿಭಾಯಿಸಲಿದ್ದಾರೆ.

ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು 'ಲ್ಯಾಟರಲ್‌ ಎಂಟ್ರಿ' ಮೂಲಕ ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದದ ನಡೆಯನ್ನು ಕಾಂಗ್ರೆಸ್‌, ಸಮಾಜವಾದಿ ಪಕ್ಷ, ಬಿಎಸ್‌ಪಿ ಖಂಡಿಸಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries