ಕಾಸರಗೋಡು: ಶ್ರೀವರಮಹಾಲಕ್ಷ್ಮೀ ಪೂಜೆಯನ್ನು ಕಾಸರಗೋಡು ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಭಕ್ತಿ ಶ್ರದ್ಧೆಯಿಮದ ಆರಿಸಲಾಯಿತು. ಪೆರ್ಲ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದ ಶ್ರೀ ಉಳ್ಳಾಲ್ತೀ ಮಹಿಳಾ ಸಂಘದ ವತಿಯಿಂದ 16ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ದೇವಸ್ಥಾನ ಸಭಾಂಗಣದಲ್ಲಿ ಜರುಗಿತು. ಒಂದುವರೆ ಸಾವಿರಕ್ಕೂ ಹೆಚ್ಚು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಪೂಜೆ ಆರಂಭಗೊಂಡು, ಮಧ್ಯಾಹ್ನ ಮಹಾಪೂಜೆಯೊಂದಿಗೆ ಸಂಪನ್ನಗೊಂಡಿತು.
ಕೂಡ್ಲು ಶೇಷವನ ಶ್ರೀ ಸುಬ್ರಹ್ಮಣ್ಯ ಸವಮಿ ದೇವಸ್ಥಾನದ ಮಹಿಳಾ ಸಮಿತಿ ನೇತೃಥ್ವದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪಊಜೆ ನೆರವೇರಿತು.
ಕುಂಟಾರು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಕುಂಟರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಿತು.
ಪೆರ್ಲ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜೆ ನಡೆಯಿತು.