ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಘೋಟವಾಡೆ ಎಂಬಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಲಾಗಿದೆ.
ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಘೋಟವಾಡೆ ಎಂಬಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಲಾಗಿದೆ.
AW 139 ಹೆಲಿಕಾಪ್ಟರ್ ಮುಂಬೈನ ಜುಹುದಿಂದ ಹೈದರಾಬಾದ್ಗೆ ಹೊರಟಿತ್ತು.
ಹವಾಮಾನ ವೈಪರೀತ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಇದು ಯಾರ ಹೆಲಿಕಾಪ್ಟರ್ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಘಟನೆಯ ಸುದ್ದಿ ತಿಳಿದ ತಕ್ಷಣ ಆ ಪ್ರದೇಶದಲ್ಲಿ ಜನಸಾಗರವೆ ನೆರದಿತ್ತು. ಹೆಲಿಕಾಪ್ಟರ್ ಭೂಮಿಗೆ ಅಪ್ಪಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.