ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಸ್ಥಾಪಿಸಲಾಗಿದ್ದ ಚೆಕ್ ಪೋಸ್ಟ್‌ನಲ್ಲಿ ಸಿಆರ್‌ಪಿಎಫ್ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಪೋರ್‌ನ ವಾಟರ್‌ಗಾಮ್ ಪ್ರದೇಶದ ಪಶುವೈದ್ಯಕೀಯ ಆಸ್ಪತ್ರೆಯ ಸಮೀಪ ಶನಿವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಘಟನೆ ನಡೆದಿದೆ.
ಸಿಆರ್‌ಪಿಎಫ್‌ನ 92ನೇ ಬೆಟಾಲಿಯನ್ ತಂಡವನ್ನು ಚೆಕ್ ಪೋಸ್ಟ್‌ನಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಭಯೋತ್ಪಾದಕ ದಾಳಿ ನಡೆಸಿದ್ದಾನೆ. ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಪಡೆ, ಪ್ರತಿ ದಾಳಿ ನಡೆಸಿ ಉಗ್ರನನ್ನು ಹತ್ಯೆಗೈದಿದೆ ಎಂದು ಅವರು ಹೇಳಿದ್ದಾರೆ.
ಉಗ್ರನ ದೇಹದಿಂದ ಪಿಸ್ತೂಲ್, ಎರಡು ಗ್ರೆನೇಡ್ ಮತ್ತು ಮ್ಯಾಗಜೀನ್ ವಶಪಡಿಸಿಕೊಳ್ಳಲಾಗಿದೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಕಣ್ಗಾವಲು ಹಾಗೂ ಅಕ್ರಮ ತಡೆಯಲು ಚೆಕ್ ಪೋಸ್ಟ್ ಅನ್ನು ಸ್ಥಾಪಿಸಲಾಗಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದ ಮತದಾನ ಸೆಪ್ಟೆಂಬರ್ 18ರಂದು ಆರಂಭವಾಗಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.