ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಚಿನ್ಮಯ ಫೆಸ್ಟ್ ಉದ್ಘಾಟನಾ ಸಮಾರಂಭ ಜರಗಿತು. ಕಾರ್ಯಕ್ರಮದಲ್ಲಿ ಶಾಲಾ ಮೇಲ್ವಿಚಾರಕ ಪ್ರಶಾಂತ್ ಬೆಳಿಂಜ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಲೋತ್ಸವ ಅಥವಾ ಚಿನ್ಮಯ ಫೆಸ್ಟ್ ಇದರ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಮಾನಸ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ಸೃಜನ್ ಕೇಶವ್ ಕಾರ್ಯಕ್ರಮ ನಿರೂಪಿಸಿದನು. ಅಚಲ್ ವಂದಿಸಿದರು.