ಕೊಚ್ಚಿ: ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟ ಮೋಹನ್ ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಚ್ಚಿಯ ಅಮೃತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಆಸ್ಪತ್ರೆಯ ಅಧಿಕಾರಿಗಳು ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೋಹನ್ ಲಾಲ್ ಅವರಿಗೆ ಉಸಿರಾಟದ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ವೈದ್ಯರು ಐದು ದಿನಗಳ ವಿಶ್ರಾಂತಿಯನ್ನು ಸೂಚಿಸಿದ್ದಾರೆ.
ಆಸ್ಪತ್ರೆಯ ವೈದ್ಯಕೀಯ ಬುಲೆಟಿನ್, ಮೋಹನ್ ಲಾಲ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದೆ.