HEALTH TIPS

ಮಾಜಿ ವಿದೇಶಾಂಗ ಸಚಿವ ಕೆ. ನಟವರ್ ಸಿಂಗ್ ನಿಧನ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

 ವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ.ನಟವರ್ ಸಿಂಗ್ (93) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಟವರ್ ಸಿಂಗ್ ಅವರನ್ನು ಎರಡು ವಾರಗಳ ಹಿಂದೆ ಹರಿಯಾಣದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಿಂಗ್ ಅವರು ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ 1931ರಲ್ಲಿ ಜನಿಸಿದ್ದರು. ಅಪಾರ ರಾಜಕೀಯ ಅನುಭವ ಹೊಂದಿದ್ದ ಅವರು ರಾಜತಾಂತ್ರಿಕರಾಗಿಯೂ ಸೇವೆ ಸಲ್ಲಿಸಿದ್ದರು. ಸಿಂಗ್ ಅವರ ದೇಶ ಸೇವೆಯನ್ನು ಪರಿಗಣಿಸಿ 1984ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ನಟವರ್ ಸಿಂಗ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತದ ವಿದೇಶಾಂಗ ಸಚಿವರಾಗಿದ್ದರು. ಇದಕ್ಕೂ ಮುನ್ನ ಅವರು ಪಾಕಿಸ್ತಾನದ ರಾಯಭಾರಿಯಾಗಿಯೂ ಸೇವೆ ಸಲ್ಲಿಸಿದ್ದರು.


ಸಿಂಗ್ ಅವರು 'ದಿ ಲೆಗಸಿ ಆಫ್ ನೆಹರೂ: ಎ ಮೆಮೋರಿಯಲ್ ಟ್ರಿಬ್ಯೂಟ್' ಮತ್ತು 'ಮೈ ಚೀನಾ ಡೈರಿ 1956-88' ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

ನಟವರ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕಾಂಗ್ರೆಸ್‌ ನಾಯಕರು ಸಂತಾಪ ಸೂಚಿಸಿದ್ದಾರೆ.

'ನಟವರ್ ಸಿಂಗ್ ಜೀಯವರ ನಿಧನದಿಂದ ನೋವಾಗಿದೆ. ಅವರು ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿಗೆ ಸಂಬಂಧಿಸಿ ತಮ್ಮದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಜತೆಗೆ, ಅವರು ಬುದ್ಧಿವಂತಿಕೆ ಮತ್ತು ಸಮೃದ್ಧ ಬರವಣಿಗೆಗೆ ಹೆಸರುವಾಸಿಯಾಗಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಓಂ ಶಾಂತಿ' ಎಂದು ಪ್ರಧಾನಿ ನರೇಂದ್ರ ಮೋದಿ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್ ಅವರ ನಿಧನದ ಸುದ್ದಿ ದುಃಖ ತಂದಿದೆ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ' ಎಂದು ಕಾಂಗ್ರೆಸ್‌ ನಾಯಕ ರಣದೀಪ್‌ ಸಿಂಗ್‌ ಸುರ್ಜೇವಾಲಾ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries