HEALTH TIPS

ಮಂಜೇಶ್ವರ: ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

 

    


            ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಂಜೇಶ್ವರ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ, ಕಾಸರಗೋಡು, ಮಂಜೇಶ್ವರ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಹೊಸಂಗಡಿ ಪ್ರೇರಣಾ ಸಭಾಂಗಣದಲ್ಲಿ ನಡೆಯಿತು.

                ಕಾರ್ಯಗಾರವನ್ನು ಕಾಸರಗೋಡು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ  ಗೋಪಾಲ ಶೆಟ್ಟಿ ಅರಿಬೈಲ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ದಕ್ಷಿಣ ಕನ್ನಡ 2 ರ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಆಶಯ ನುಡಿಗಳನ್ನಾಡಿದರು. ವಿಟ್ಲ, ಕಾಸರಗೋಡು, ಮಂಜೇಶ್ವರ ತಾಲೂಕಿನ ಸಾಧಕ ತಂಡಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎಲ್ಲಾ ಸ್ವಯಂ ಸೇವಕರಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಾಗೂ ಆರೋಗ್ಯ ರಕ್ಷಾ ವಿಮೆಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. 

          ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ವಹಿಸಿದ್ದರು. ಈ ಸಂದಭರ್Àದಲ್ಲಿ  ಕಾಸರಗೋಡು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಖಿಲೇಶ್ ನಗುಮುಗಂ, ಕಾಸರಗೋಡು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್ ಬಾಗ್, ಉಷಾ ಫೈರ್ ಸೇಫ್ಟಿ ಕಂಪನಿಯ ತರಬೇತುದಾರ ಸಂತೋಷ ಪೀಟರ್ ಡಿ'ಸೋಜಾ, ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ, ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ. ಹಾಗೂ ಕಾಸರಗೋಡು, ಮಂಜೇಶ್ವರ ತಾಲೂಕಿನ ಮೇಲ್ವಿಚಾರಕರು, ಆಡಳಿತ ಪ್ರಬಂಧಕರು ಮತ್ತು ವಿಟ್ಲ, ಕಾಸರಗೋಡು, ಮಂಜೇಶ್ವರ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು, ಘಟಕ ಪ್ರತಿನಿಧಿಗಳು, ಸ್ವಯಂ ಸೇವಕರು ಉಪಸ್ಥಿತರಿದ್ದರು.

            ಸಭಾ ಕಾರ್ಯಕ್ರಮವನ್ನು ತಲಪಾಡಿ ವಲಯ ಮೇಲ್ವಿಚಾರಕ ಭಾಸ್ಕರ ನಿರೂಪಿಸಿದರು. ಕಾಸರಗೋಡು ತಾಲೂಕು ಕ್ಷೇತ್ರ ಯೋಜನಾಧಿಕಾರಿ ಮುಖೇಶ್ ಸ್ವಾಗತಿಸಿ, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ವಂದಿಸಿದರು. ಕಾರ್ಯಕ್ರಮದ ನಂತರ ವಿಪತ್ತು ನಿರ್ವಹಣಾ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries