ಕಾಸರಗೋಡು: ವಿಶ್ವ ಸ್ತನ್ಯಪಾನ ದಿನಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನೆ ತೃಕ್ಕರಿಪುರ ಉಡುಂಬುತ್ತಲ ಕುಟುಂಬ ಆರೋಗ್ಯ ಕೇಂದ್ರದಲ್ಲಿ ಜರುಗಿತು. ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ. ಬಿ.ಸಂತೋಷ್ ಸಮಾರಂಭ ಉದ್ಘಾಟಿಸಿದರು. ತೃಕರಿಪುರ ಗ್ರಾಮ ಪಂಚಾಯಿತಿ ಸದಸ್ಯ ಎಂ.ಕೆ.ಹಾಜಿ ಅಧ್ಯಕ್ಷತೆ ವಹಿಸಿದ್ದರು.
ಜನಪರ ಆರೋಗ್ಯ ಕೇಂದ್ರದ ಜಿಲ್ಲಾ ನೋಡಲ್ ಅಧಿಕಾರಿ ಡಾ. ಧನ್ಯಾ ದಯಾನಂದ್, ನೀಲೇಶ್ವರಂ ಬ್ಲಾಕ್ ಸಿಡಿಪಿಒ ಜ್ಯೋತಿ ಪಿ, ಉಪ ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಪ್ರಶಾಂತ್ ಎನ್.ಪಿ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಜೂನಿಯರ್ ಕನ್ಸಲ್ಟೆಂಟ್ ಕಮಲ್ ಕೆ ಜೋಸ್ ಉಪಸ್ಥಿತರಿದ್ದರು. ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಸ್ವಾಗತಿಸಿದರು. ಉಡುಂಬುತ್ತಲ ಕುಟುಂಬ ಆರೋಗ್ಯ ಕೇಂದ್ರದ ಪಿ.ಎಚ್.ಎನ್.ಪದ್ಮಿನಿ ಇ.ವಂದಿಸಿದರು.
ಉಡುಂಬುತ್ತಲ ಕುಟುಂಬ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಮಕ್ಕಳ ತಜ್ಞ ಡಾ. ಸಹದ್ ಬಿನ್ ಉಸ್ಮಾನ್ ಮತ್ತು ಜಿಲ್ಲಾ ಎಂಸಿಎಚ್ ಅಧಿಕಾರಿ ಶೋಭನಾ ಎಂ ಅವರು ಎದೆಹಾಲಿನ ಮಹತ್ವದ ಕುರಿತು ತರಗತಿ ನಡೆಸಿದರು. ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ), ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಐಎಪಿ ಕಾಂಞಂಗಾಡ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಹಾಗೂ ತಾಯಂದಿರು ಭಾಗವಹಿಸಿದ್ದರು.
ಸ್ತನ್ಯಪಾನ ಕ್ರಿಯೆಗಾಗಿ ವಿಶ್ವ ಒಕ್ಕೂಟ (ಡಬ್ಲ್ಯೂಎಬಿಎ), ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‍ಒ) ಮತ್ತು ಯುನಿಸೆಫ್ ಸ್ತನ್ಯಪಾನ ಸಪ್ತಾಹದ ಆಚರಣೆಯನ್ನು ಮುನ್ನಡೆಸಲು ವಿಶ್ವದಾದ್ಯಂತ ರಾಷ್ಟ್ರಗಳನ್ನು ಒಗ್ಗೂಡಿಸುತ್ತಿದೆ. ಸ್ತನ್ಯಪಾನದಸ್ತನ್ಯಪಾನದ ಮಹತ್ವದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಗಸ್ಟ್ 1 ರಿಂದ 7 ರವರೆಗೆ ಸ್ತನ್ಯಪಾನ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ. ಎ.ವಿ.ರಾಮದಾಸ್ ಮಾಹಿತಿ ನೀಡಿದರು.