ಪೆರ್ಲ :ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಎಣ್ಮಕಜೆ ಪಂಚಾಯಿತಿ ಸಮಿತಿ ರಚನಾ ಸಭೆ ಆ. 27ರಂದು ಸಂಜೆ 6.30ಕ್ಕೆ ಪೆರ್ಲ ಸನಿಹದ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರಿ ಉಳ್ಳಾಲ್ತಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಊರ ಭಗವದ್ಭಕ್ತರು, ಸಂಘ ಸಂಸ್ಥೆ ಪ್ರತಿನಿಧಿಗಳು ಸಭೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.