ನವದೆಹಲಿ: ರೈತರಿಗೆ ಕೃಷಿಯ ಬಗ್ಗೆ ವೈಜ್ಞಾನಿಕ ಅರಿವು ಮೂಡಿಸಲು ಸರ್ಕಾರವು ಮಾಸಿಕ 'ಕಿಸಾನ್ ಕಿ ಬಾತ್' ರೇಡಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ನವದೆಹಲಿ: ರೈತರಿಗೆ ಕೃಷಿಯ ಬಗ್ಗೆ ವೈಜ್ಞಾನಿಕ ಅರಿವು ಮೂಡಿಸಲು ಸರ್ಕಾರವು ಮಾಸಿಕ 'ಕಿಸಾನ್ ಕಿ ಬಾತ್' ರೇಡಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಆಧುನಿಕ ಕೃಷಿ ಪದ್ಧತಿ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ.
ಕೃಷಿ ವಿಜ್ಞಾನಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ಸಚಿವರು ಕೃಷಿ ಪದ್ಧತಿಯಲ್ಲಿ ಅನುಸರಿಸಬೇಕಿರುವ ವಿಧಾನಗಳು ಮತ್ತು ವೈಜ್ಞಾನಿಕ ಪ್ರಗತಿ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ದೇಶದ ಕೃಷಿ ವಲಯದ ಪುನಶ್ಚೇತನಕ್ಕೆ ಒತ್ತು ನೀಡುವುದು ಈ ರೇಡಿಯೊ ಕಾರ್ಯಕ್ರಮ ಉದ್ದೇಶವಾಗಿದೆ. ರೈತರು ಮತ್ತು ಕೃಷಿ ವಿಜ್ಞಾನ ಕೇಂದ್ರಗಳನ್ನು ಒಂದೇ ವೇದಿಕೆಯಡಿ ತರುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.