ಮುಳ್ಳೇರಿಯ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡೂರು ಮಂಜುನಾಥ ನವಜೀವನ ಸಮಿತಿಯ ಸಭೆ ನವಜೀವನ ಸಮಿತಿ ಕಚೇರಿಯಲ್ಲಿ ಜರಗಿತು. ಮಂಜುನಾಥ ನವಜೀವನ ಸಮಿತಿಯ ಅಧ್ಯಕ್ಷ ದಿನೇಶ್ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಕಾಸರಗೋಡು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂ, ಸಾಮಾಜಿಕ ಕಾರ್ಯಕರ್ತ ಅಶ್ವಿಥ್ ಸರಳಾಯ ಅಡೂರು ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ರೇಖಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.