ತಿರುವನಂತಪುರಂ: ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮೇಲೆ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಕೋರಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ತಿರುವನಂತಪುರಂ ನಿವಾಸಿಯೊಬ್ಬರು ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಹೇಮಾ ಸಮಿತಿಯ ಸಂಪೂರ್ಣ ವರದಿಯನ್ನು ನ್ಯಾಯಾಲಯಕ್ಕೆ ತರಬೇಕು ಎಂಬುದು ಅರ್ಜಿಯಲ್ಲಿನ ಆಗ್ರಹವಾಗಿದೆ. ಗಣನೀಯ ಸಾಕ್ಷ್ಯವನ್ನು ಸಹ ಕರೆಯಲು ಆಗ್ರಹಿಸಲಾಗಿದೆ.
ವರದಿಯಲ್ಲಿರುವ ಅಂಶಗಳನ್ನು ಪರಿಗಣಿಸಿ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಹೈಕೋರ್ಟ್ ಗುರುವಾರ ಅರ್ಜಿಯ ವಿಚಾರಣೆ ನಡೆಸಲಿದೆ.