ನವದೆಹಲಿ: ಹರಿಯಾಣದ ಹಥಿನಿಕುಂಡ ಬ್ಯಾರೇಜ್‌ನಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಯಮುನಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಪರಿಣಾಮ ದೆಹಲಿಯಲ್ಲಿ ಪ್ರವಾಹದ ಆತಂಕ ಎದುರಾಗಿದೆ.
ನವದೆಹಲಿ: ಹರಿಯಾಣದ ಹಥಿನಿಕುಂಡ ಬ್ಯಾರೇಜ್‌ನಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಯಮುನಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಪರಿಣಾಮ ದೆಹಲಿಯಲ್ಲಿ ಪ್ರವಾಹದ ಆತಂಕ ಎದುರಾಗಿದೆ.
'ಯಮುನಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಪ್ರವಾಹ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.
'ಯಮುನಾ ನದಿಯ ಅಪಾಯ ಮಟ್ಟ 204.5 ಮೀಟರ್ ಆಗಿದೆ. ಆದರೆ ಇಂದು ಹಳೆಯ ರೈಲ್ವೆ ಸೇತುವೆ ಬಳಿ ಅಪಾಯ ಮಟ್ಟ ಮೀರಿ ನೀರಿನ ಹರಿವು 204.35 ಮೀಟರ್ ತಲುಪಿದೆ. ಹಥಿನಿಕುಂಡ ಬ್ಯಾರೇಜ್‌ನಿಂದ 10-13 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ' ಎಂದು ಅವರು ತಿಳಿಸಿದರು.
'ನದಿ ಪಾತ್ರದ ಜನಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಪ್ರವಾಹ ಸ್ಥಿತಿ ನಿರ್ಮಾಣವಾದರೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ರಕ್ಷಣಾ ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ' ಎಂದೂ ಅವರು ಮಾಹಿತಿ ನೀಡಿದರು.