ನವದೆಹಲಿ: ಮದ್ರಾಸ್ ಹೈಕೋರ್ಟ್‌ಗೆ ತಮ್ಮನ್ನು ವರ್ಗಾವಣೆ ಮಾಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶುಕ್ರವಾರ ತಳ್ಳಿ ಹಾಕಿದೆ.
0
samarasasudhi
ಆಗಸ್ಟ್ 31, 2024
ನವದೆಹಲಿ: ಮದ್ರಾಸ್ ಹೈಕೋರ್ಟ್‌ಗೆ ತಮ್ಮನ್ನು ವರ್ಗಾವಣೆ ಮಾಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶುಕ್ರವಾರ ತಳ್ಳಿ ಹಾಕಿದೆ.
'ಉತ್ತಮ ಆಡಳಿತ ಉದ್ದೇಶದಿಂದ ನಿಮ್ಮನ್ನು ವರ್ಗಾವಣೆ ಮಾಡಲಾಗಿದೆ.
ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್.ಗವಾಯಿ, ಸೂರ್ಯಕಾಂತ್ ಹಾಗೂ ಹೃಷಿಕೇಶ್ ರಾಯ್ ಅವರಿದ್ದ ಕೊಲಿಜಿಯಂ, ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರನ್ನು ವರ್ಗಾವಣೆ ಮಾಡುವ ಕುರಿತ ನಿರ್ಣಯ ಕೈಗೊಂಡಿತ್ತು. ತನ್ನ ಈ ನಿರ್ಣಯವನ್ನು ಆ.21ರಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು.