ಕಾಸರಗೋಡು: ಮಹಿಳಾಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾಸರಗೋಡು ಸೀರೆಗಳನ್ನು ತಯಾರಿಸುವ ಕಾಸರಗೋಡು ವಿದ್ಯಾನಗರದ ನೇಕಾರರ ಸಹಕಾರಿ ಸಂಘದಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಅಧ್ಯಕ್ಷ ರವೀಶ ತಂತ್ರಿ ಕುಂಟಾರ್ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನೆರವೇರಿಸಿದರು. ಕೈಮಗ್ಗದಲ್ಲಿ ದೀರ್ಘ ಕಾಲದಿಂದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಸದಾರಾಮ ಅವರನ್ನು ರವೀಶ ತಂತ್ರಿ ಕುಂಟಾರು ಸನ್ಮಾನಿಸಿದರು. ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್ ಅವರು ಅಂಚೆ ಇಲಾಖೆಯ ಅಪಘಾತ ವಿಮಾ ಪಾಲಿಸಿ ವಿತರಿಸಿದರು.
ಮಹಿಳಾಮೋರ್ಚಾ ಜಿಲ್ಲಾಧ್ಯಕ್ಷೆ ಪುಷ್ಪಾ ಗೋಪಾಲನ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರಮೀಳಾ ಸಿ. ನಾಯ್ಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ. ಜನನಿ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಅಮೆಕ್ಕಳ, ಮಧೂರು ಪಂಚಾಯಿತಿ ಸಮಿತಿ ಅಧ್ಯಕ್ಷೆ ಮಹಿಳಾಮೋರ್ಚಾ ರಾಜ್ಯ ಸಮಿತಿ ಸದಸ್ಯೆ ಎಂ. ಶೈಲಜಾ ಭಟ್, ರಬಿತಾ ಮತ್ತು ಯಶೋದಾ ಉಪಸ್ಥಿತರಿದ್ದರು.