ಕುಂಬಳೆ: ನಂದಾರಪದವಿನಿಮದ ತಿರುವನಂತಪುರ ವರೆಗೆ ಸಾಗುವ ಮಲೆನಾಡು ಹೆದ್ದಾರಿಯ ಪುತ್ತಿಗೆ ಪಂಚಾಯಿತಿ ಅಂಗಡಿಮೊಗರಿನಲ್ಲಿ ಮಣ್ಣುಕುಸಿದು ರಸ್ತೆಗೆ ಬಿದ್ದಿದ್ದು, ಈ ಪ್ರದೇಶದಲ್ಲಿ ಆತಂಕ ಎದುರಾಗಿದೆ.
ರಸ್ತೆ ನಿರ್ಮಾಣಕ್ಕಾಗಿ ಈ ಪ್ರದೇಶದಿಂದ ಮಣ್ಣು ತೆಗೆಯಲಾಗಿದ್ದು, ಇದೇ ಪ್ರದೇಶದಲ್ಲಿ ಭುಕುಸಿತ ಉಂಟಾಗಿದೆ. ಅವೈಜ್ಞಾನಿಕವಾಗಿ ಮಣ್ಣು ತೆರವುಗೊಳಿಸಿರುವುದು ಕುಸಿತಕ್ಕೆ ಕಾರಣವೆನ್ನಲಾಗಿದೆ. ಈ ಪ್ರದೇಶದಲ್ಲಿ ತಗ್ಗುಪ್ರದೇಶದಲ್ಲಿರುವ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ಸ್ಥಳಕ್ಕೆ ಶಾಸಕ ಎ.ಕೆ.ಎಂ ಅಶ್ರಫ್ ಭೇಟಿ ನೀಡಿದ್ದು, ಅಗತ್ಯ ಕ್ರಮಕೈಗೊಳ್ಳುವಂತೆ ಸಂಬAಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ.