HEALTH TIPS

ಜಮ್ಮು-ಕಾಶ್ಮೀರ: ಹಿರಿಯ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

 ಶ್ರೀನಗರ: ಮಹತ್ವದ ಬೆಳವಣಿಗೆಯಲ್ಲಿ, ಜಮ್ಮು-ಕಾಶ್ಮೀರದ ಪೊಲೀಸ್‌ ಇಲಾಖೆಯ ಹಲವು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ಘೋಷಣೆಗೆ ಮುನ್ನ ಅಧಿಕಾರಿಗಳ ವರ್ಗಾವಣೆ ಮಾಡಿರುವುದಕ್ಕೆ ರಾಜಕೀಯ ಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ಹಿರಿಯ ಐಪಿಎಸ್‌ ಅಧಿಕಾರಿ ನಳಿನ್‌ ಪ್ರಭಾತ್‌ ಅವರನ್ನು ವಿಶೇಷ ಡಿಜಿ ಆಗಿ ನೇಮಕ ಮಾಡಲಾಗಿದೆ. ಸದ್ಯ, ಆರ್‌.ಆರ್‌.ಸ್ವೇನ್‌ ಅವರು ಜಮ್ಮು-ಕಾಶ್ಮೀರ ಪೊಲೀಸ್‌ನ ಡಿಜಿ ಆಗಿದ್ದು, ಸೆ.30ರಂದು ನಿವೃತ್ತರಾಗಲಿದ್ದಾರೆ. ಬಳಿಕ, ಪ್ರಭಾತ್‌ ಅಧಿಕಾರ ಸ್ವೀಕರಿಸಲಿದ್ದಾರೆ.

ಸಿಐಡಿ ಎಡಿಜಿಪಿ ನಿತಿಶ್‌ ಕುಮಾರ್‌ ಅವರನ್ನು ಸಿಐಡಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಸ್ವೇನ್‌ ಅವರಿಗೆ ಸಿಐಡಿಯ ಹೆಚ್ಚುವರಿ ಹೊಣೆ ನೀಡಲಾಗಿತ್ತು.

ರದ್ದತಿಗೆ ಮನವಿ: ಲೆಫ್ಟಿನೆಂಟ್‌ ಗವರ್ನರ್‌ ನೇತೃತ್ವದ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಪೊಲೀಸ್‌ ಇಲಾಖೆಯಲ್ಲಿ ಭಾರಿ ವರ್ಗಾವಣೆ ಮಾಡಿದೆ: ಎಂದು ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ದೂರಿದೆ.

ಈ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್‌ ಸಗರ್ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries