ಕಾರವಾರ: ಕಳೆದ ತಿಂಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು 11 ಜನರು ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಇದೀಗ ದುರ್ಘಟನೆಯಲ್ಲಿ ನಾಪತ್ತೆಯಾಗಿದ್ದ ಲಾರಿಯ ಬಿಡಿಭಾಗ ಪತ್ತೆಯಾಗಿದೆ.
ಕಾರವಾರ: ಕಳೆದ ತಿಂಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು 11 ಜನರು ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಇದೀಗ ದುರ್ಘಟನೆಯಲ್ಲಿ ನಾಪತ್ತೆಯಾಗಿದ್ದ ಲಾರಿಯ ಬಿಡಿಭಾಗ ಪತ್ತೆಯಾಗಿದೆ.
28 ದಿನಗಳ ಹಿಂದೆ ಕೊಚ್ಚಿ ಹೋಗಿದ್ದ 11 ಜನರ ಪೈಕಿ 8 ಜನರ ಶವಗಳು ಪತ್ತೆಯಾಗಿದೆ.
ಉಳಿದಂತೆ ಕೇರಳ ಮೂಲದ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಇನ್ನೂ ಪತ್ತೆಯಾಗಿಲ್ಲ. ಅವರಿಗಾಗಿ ಮುಳುಗು ತಜ್ಞರು ಶೋಧಕಾರ್ಯ ನಡೆಸುತ್ತಿದ್ದಾರೆ.
ಇದೀಗ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಮಂಗಳವಾರ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಲಾರಿಯ ಜಾಕ್ ಸಿಕ್ಕಿದ್ದು, ಇದು ಅರ್ಜುನ್ ಓಡಿಸುತ್ತಿದ್ದ ಲಾರಿಯದ್ದೇ ಎಂದು ಮಾಲೀಕ ಮುಫಿನ್ ಖಚಿತಪಡಿಸಿದ್ದಾರೆ.