ಕುಂಬಳೆ: ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಎಡನಾಡು ಬ್ಯಾಂಕ್ ಸಭಾಂಗಣದಲ್ಲಿ ಪಂಚಾಯತಿ ಪ್ರಧಾನ ಕಾರ್ಯದರ್ಶಿ ಮೇಲ್ಪಟ್ಟ ನಾಯಕರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರಂ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಉತ್ತರ ವಲಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ ಉದ್ಘಾಟಿಸಿದರು. ಸದಸ್ಯತನ ಅಭಿಯಾನದ ಕುರಿತು ಜಿಲ್ಲಾ ಕಾರ್ಯದರ್ಶಿ ಉಮಾ ಕಡಪ್ಪುರ ತರಬೇತಿ ನೀಡಿದರು. ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಅಮೆಕ್ಕಳ ಮಾತನಾಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್ ಕುಮಾರ್ ಸ್ವಾಗತಿಸಿ, ವಸಂತಕುಮಾರ್ ಮಯ್ಯ ವಂದಿಸಿದರು.