ನವದೆಹಲಿ: ಜೈಪುರದ ಸಿಕೆ ಬಿರ್ಲಾ ಆಸ್ಪತ್ರೆ, ಮೊನಿಲೆಕ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ಭಾನುವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಸುದ್ದಿ ಹರಡುತ್ತಿದ್ದಂತೆ ರೋಗಿಗಳು ಮತ್ತು ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ.
ನವದೆಹಲಿ: ಜೈಪುರದ ಸಿಕೆ ಬಿರ್ಲಾ ಆಸ್ಪತ್ರೆ, ಮೊನಿಲೆಕ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ಭಾನುವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಸುದ್ದಿ ಹರಡುತ್ತಿದ್ದಂತೆ ರೋಗಿಗಳು ಮತ್ತು ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಇದುವರೆಗೆ ನಾಲ್ಕು ಆಸ್ಪತ್ರೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವುದು ತಿಳಿದುಬಂದಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜೈಪುರ ಪೊಲೀಸ್ ಕಮಿಷನರ್ ಬಿಜು ಜಾರ್ಜ್ ಜೋಸೆಫ್ 'ಪಿಟಿಐ'ಗೆ ತಿಳಿಸಿದ್ದಾರೆ.
ಆಸ್ಪತ್ರೆಯ ಹಾಸಿಗೆಗಳ ಕೆಳಗೆ ಮತ್ತು ಸ್ನಾನದ ಕೋಣೆಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ. ಈ ಹತ್ಯಾಕಾಂಡದ ಹಿಂದೆ ಭಯೋತ್ಪಾದಕರು ಇದ್ದಾರೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.
ಹರಿಯಾಣದ ಗುರುಗ್ರಾಮದಲ್ಲಿರುವ ಆಂಬಿಯೆನ್ಸ್ ಮಾಲ್‌ಗೆ ಶನಿವಾರ ಬಾಂಬ್ ಬೆದರಿಕೆ ಬಂದಿತ್ತು. ಇದಾದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಶೋಧ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದೇ ವರ್ಷ ಮೇ ತಿಂಗಳಲ್ಲಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಸುಮಾರು 250 ಶಾಲೆಗಳಿಗೆ ಇದೇ ರೀತಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಆದರೆ, ತಪಾಸಣೆ ನಡೆಸಿದ ಸಂದರ್ಭದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.