HEALTH TIPS

ಬೇರೆ ದಾರಿಯೇ ಇಲ್ಲ: ಅವಕಾಶಕ್ಕಾಗಿ ಮಂಚಕ್ಕೆ ಕರೆಯುವವರ ಬಗ್ಗೆ ಮೀರಾ ಜಾಸ್ಮಿನ್ ಕೊಟ್ಟ ಹೇಳಿಕೆ ವೈರಲ್​

          ತಿರುವನಂತಪುರಂ: ಕೇರಳದಲ್ಲಿ ಹೇಮಾ ಸಮಿತಿಯ ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳಂ ಚಿತ್ರರಂಗದ ಕರಾಳ ಮುಖ ಒಂದೊಂದಾಗಿ ಕಳಚಿಕೊಳ್ಳತ್ತಿದೆ. ಅನೇಕ ನಟಿಯರು ತಾವು ಎದುರಿಸಿದ ಕಹಿ ಘಟನೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುತ್ತಿದ್ದಾರೆ. ನಿರ್ದೇಶಕ ರಂಜಿತ್ ವಿರುದ್ಧದ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿವೆ.

            ಸದ್ಯ ಈ ವರದಿ ಕೇರಳದಲ್ಲಿ ಭಾರಿ ಕೋಲಾಹಲ ಎಬ್ಬಿಸಿದೆ. ಹೇಮಾ ಸಮತಿ ವರದಿ ಬಿಡುಗಡೆಯಾದ ಬಳಿಕ ಅನೇಕ ನಟಿಯರು ತಮಗಾದ ಅನುಭವಗಳ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ನಟಿ ಮೀರಾ ಜಾಸ್ಮಿನ್, ಬಹಳ ಹಿಂದೆಯೇ ಹೇಳಿದ ಮಾತುಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದ್ದರೆ ಎಲ್ಲ ನಟಿಯರು ಮೀರಾ ಜಾಸ್ಮಿನ್​ ರೀತಿ ಇರಬೇಕು ಎನ್ನುತ್ತಿದ್ದಾರೆ.

              ಅಷ್ಟಕ್ಕೂ ಮೀರಾ ಜಾಸ್ಮಿನ್​ ಏನು ಹೇಳಿದ್ದರು ಅಂದರೆ, ನನ್ನ ಜೊತೆ ಯಾರಾದರೂ ಅನುಚಿತವಾಗಿ ವರ್ತಿಸಿದರೆ, ನಾನು ಸುಮ್ಮನಿರುವುದಿಲ್ಲ. ಏಕೆಂದರೆ, ನಾನು ಅಶಿಸ್ತಿನ ನಟಿಯಲ್ಲ. ಅವರಿಗೆ ನನ್ನ ಬಗ್ಗೆ ಏನಾದರೂ ದುರುದ್ದೇಶವಿರಬಹುದು. ನಾವು ಅವರಿಗೆ ಆದ್ಯತೆ ನೀಡದಿದ್ದಾಗ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹರಡಬಹುದು. ಯಾರಾದರೂ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದಾಗ ನಾನು ತಕ್ಷಣ ಪ್ರತಿಕ್ರಿಯಿಸುತ್ತೇನೆ. ಯಾವುದೇ ಕಾರಣಕ್ಕೂ ನಾನು ಸುಮ್ಮನೇ ಇರುವವಳಲ್ಲ ಎಂದು ಹೇಳಿದ್ದರು.

            ಹೊಸ ಕಲಾವಿದೆಯರಿಗೆ ಬೇರೆ ದಾರಿ ಇಲ್ಲ ಎನ್ನುವ ಕಾರಣಕ್ಕೆ ಕೆಲ ಸಮಾಜಘಾತುಕರು ಶೋಷಣೆ ಮಾಡುತ್ತಿದ್ದಾರೆ. ಅವಕಾಶದ ಹೆಸರಿನಲ್ಲಿ ಮಂಚಕ್ಕೆ ಕರೆಯುತ್ತಾರೆ. ಆದರೆ, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾನಾದರೆ ಇಂತಹ ವಿಚಾರದಲ್ಲಿ ಹೋರಾಡುತ್ತಿದ್ದೆ. ನಾವಿಲ್ಲಿಗೆ ಬಂದಿರುವುದು ದುಡಿಯಲು ಹೊರತು, ನಾವು ಯಾರ ಗುಲಾಮರೂ ಅಲ್ಲ. ನಾನು ಯಾರಿಗೂ ಹೆದರುವುದಿಲ್ಲ ಎಂದು ಈ ಹಿಂದೆ ಮೀರಾ ಆಡಿದ್ದ ಮಾತು ಈಗ ವೈರಲ್​ ಆಗುತ್ತಿದೆ.

ಏನಿದು ಹೇಮಾ ಸಮಿತಿ ವರದಿ?
           ಮಲಯಾಳಂ ಚಿತ್ರರಂಗದ ಖ್ಯಾತ ನಟಿಯ ಮೇಲೆ 2017ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ರಾಷ್ಟ್ರವ್ಯಾಪಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ಇಂದಿಗೂ ಈ ಪ್ರಕರಣದ ವಿಚಾರಣೆ ನಡೆಯುತ್ತಲೇ ಇದೆ. ಈ ಪ್ರಕರಣ ಬೆನ್ನಲ್ಲೇ ನ್ಯಾಯಾಮೂರ್ತಿ ಕೆ. ಹೇಮಾ (ನಿವೃತ್ತ) ಅವರ ನೇತೃತ್ವದಲ್ಲಿ ಮಾಜಿ ಅಧಿಕಾರಿ ಕೆಬಿ ವಲ್ಸಲಕುಮಾರಿ ಮತ್ತು ಹಿರಿಯ ನಟಿ ಶಾರದಾ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಕೇರಳ ಸರ್ಕಾರ ರಚನೆ ಮಾಡಿತ್ತು. ಈ ಸಮಿತಿ 2019ರ ಡಿಸೆಂಬರ್​ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ನಾಲ್ಕೂವರೆ ವರ್ಷಗಳ ಬಳಿಕ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದ್ದು, ಮಲಯಾಳಂ ಚಿತ್ರರಂಗದ ಕರಾಳ ಮುಖ ಅನಾವರಣವಾಗಿದೆ. ಮಲಯಾಳಂ ಸಿನಿರಂಗದ ಒಂದೊಂದೆ ಕರಾಳ ಮುಖವಾಡ ಕಳಚಿ ಬೀಳುತ್ತಿದೆ. ಸಿನಿಮಾದಲ್ಲಿ ಮಾತ್ರವಲ್ಲದೆ ಎಲ್ಲ ಕ್ಷೇತ್ರಗಳಲ್ಲೂ ಲೈಂಗಿಕ ಶೋಷಣೆ ನಡೆಯುತ್ತಿದೆ. ಆದರೆ, ಸಿನಿಮಾರಂಗದಲ್ಲಿ ವ್ಯಾಪಕವಾಗಿದೆ ಎನ್ನುತ್ತಾರೆ ನೊಂದ ಮಹಿಳೆಯರು. ಸಿನಿಮಾದಲ್ಲಿ ಅವಕಾಶ ಬೇಕಾದರೆ ಕಾಮತೃಷೆ ತೀರಿಸಬೇಕು ಎನ್ನುತ್ತಾರೆ ನೊಂದ ಕಲಾವಿದೆಯರು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries