ಉಪ್ಪಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಲ್ಪಾಡಿ ಗ್ರಾಪಂ ಸದಸ್ಯುಪ್ಪಳ ಮೂಸೋಡಿ ನಿವಾಸಿ ಮಹಮ್ಮದ್ ಹುಸೈನ್ ಎಂಬಾತನ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಉಪ್ಪಳ ಪೇಟೆಯಲ್ಲಿ ಟ್ರಾಫಿಕ್ ಕಾನೂನು ಉಲ್ಲಂಘಿಸಿದ ಆರೋಪದಲ್ಲಿ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಈತ ಚಲಾಯಿಸುತ್ತಿದ್ದ ಬುಲ್ಲೆಟ್‍ನ ಫೋಟೋ ತೆಗೆದಿದ್ದು, ಇದರಿಂದ ಸಿಟ್ಟಿಗೆದ್ದ ಮಹಮ್ಮದ್ ಹುಸೈನ್ ಬುಲ್ಲೆಟ್ ನಡುರಸ್ತೆಯಲ್ಲಿ ನಿಲ್ಲಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದನು.