ಢಾಕಾ: ಶೇಖ್ ಹಸೀನಾ ಅವರು ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು, ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶ ಸೇನೆ ಮುಖ್ಯಸ್ಥ ತಿಳಿಸಿದ್ದಾರೆ.
ಢಾಕಾ: ಶೇಖ್ ಹಸೀನಾ ಅವರು ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು, ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶ ಸೇನೆ ಮುಖ್ಯಸ್ಥ ತಿಳಿಸಿದ್ದಾರೆ.
ವಿಡಿಯೊ ಸಂದೇಶದ ಮೂಲಕ ಈ ವಿಚಾರವನ್ನು ಖಚಿತಪಡಿಸಿರುವ ಅವರು, ದೇಶ ಮುನ್ನಡೆಸಲು ಮಧ್ಯಂತರ ಸರ್ಕಾರ ರಚಿಸಲು ಸೇನೆ ನೆರವಾಗಲಿದೆ ಎಂದು ಹೇಳಿದ್ದಾರೆ.
ಹಿಂಸಾಚಾರ ಕೈಬಿಡುವಂತೆ ಜನರಲ್ಲಿ ಮನವಿ ಮಾಡಿದ್ದು, ಈವರೆಗೆ ಆಗಿರುವ ಪ್ರತಿಯೊಂದು ಸಾವಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸರ್ಕಾರದ ವಿರುದ್ಧ ಭಾನುವಾರದಿಂದ ಆರಂಭವಾಗಿರುವ ಬೃಹತ್ ಪ್ರತಿಭಟನೆಯಿಂದಾಗಿ ಇದುವರೆಗೆ 106 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಸೀನಾ ಅವರು ಇಂದು (ಸೋಮವಾರ) ರಾಜೀನಾಮೆ ಸಲ್ಲಿಸಿ, ದೇಶ ತೊರೆದಿದ್ದಾರೆ ಎಂದು ವರದಿಯಾಗಿದೆ.
1971ರಲ್ಲಿ ಬಾಂಗ್ಲಾದೇಶ ಸ್ವಾತಂತ್ರ ಚಳುವಳಿಯಲ್ಲಿ ಹೋರಾಡಿದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ 30 ರಷ್ಟು ಮೀಸಲಾತಿ ಕಲ್ಪಿಸುವ ನೀತಿ/ಕಾನೂನನ್ನು ವಿರೋಧಿಸಿ ಹಸೀನಾ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು.
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಪ್ರತಿಭಟನಾಕಾರರು ವಾಣಿಜ್ಯ ಕೇಂದ್ರಕ್ಕೆ ಬೆಂಕಿ ಹಚ್ಚಿರುವುದು