ಮಂಜೇಶ್ವರ: ಕೊಡ್ಲಮೊಗರು ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾಮಟ್ಟದ ಕಲೋತ್ಸವ ನಡೆಯಿತು. ರಂಗಕಲಾವಿದ, ಬಿಪಿಪಿಎಎಲ್‍ಪಿ ಶಾಲಾ ಮುಖ್ಯೋಪಾಧ್ಯಾಯ ಸದಾಶಿವ ಬಾಲಮಿತ್ರ ಸಮಾರಂಬ ಉದ್ಘಾಟಿಸಿದರು. ಕಲೋತ್ಸವಗಳು ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸೃಜನಶೀಲತೆ ಅನಾವರಣಗೊಳಿಸುವ ವೇದಿಕೆಯಾಗಿದೆ. ಸತತ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ರಂಗಭೂಮಿಯಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ತಿಳಿಸಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಮೋಹನ ಬಿ ಮತ್ತು ಮಾತೃ ಸಂಘದ ಅಧ್ಯಕ್ಷೆ ರಿಯಾನ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ಸದಾಶಿವ ಬಾಲಮಿತ್ರ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕಿ ಪೂರ್ಣಿಮ ಸನ್ಮಾನ ಪತ್ರ ವಾಚಿಸಿದರು. ಕ್ಲಬ್ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ವಿಜಯ ಕುಮಾರ್ ಸ್ವಾಗತಿಸಿದರು. ಶಿಕ್ಷಕಿಯರಾದ ಸ್ವಾತಿ, ಆರತಿ, ವಿದ್ಯಾರ್ಥಿನಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಬಿ ವಂದಿಸಿದರು.