ನವದೆಹಲಿ: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ವಿಲೀನಕ್ಕೆ ಯಾವುದೇ ಪ್ರಸ್ತಾವವಿಲ್ಲ ಎಂದು ಸರ್ಕಾರ ಸೋಮವಾರ ತಿಳಿಸಿದೆ.
ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ, ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು 2019-20ರಿಂದ 2021-22 ರ ಅವಧಿಯಲ್ಲಿ ಮೂರು ಸಾರ್ವಜನಿಕ ವಲಯ ಉದ್ಯಮ (ಪಿಎಸ್‌ಯು) ಸಾಮಾನ್ಯ ವಿಮಾ ಕಂಪನಿಗಳಾದ ಓರಿಯೆಂಟಲ್ ಇನ್ಶೂರೆನ್ಸ್, ನ್ಯಾಷನಲ್ ಇನ್ಶೂರೆನ್ಸ್ ಮತ್ತು ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್‌ಗೆ ₹17,450 ಕೋಟಿಗಳನ್ನು ಹೂಡಿಕೆ ಮಾಡಿದೆ ಎಂದರು.
'ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ವಿಲೀನ ಮಾಡುವ ಕುರಿತು ಸದ್ಯಕ್ಕೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ' ಎಂದು ಹೇಳಿದರು.
2018-19ರ ಬಜೆಟ್‌ನಲ್ಲಿ ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ, ಮೂರು ಕಂಪನಿಗಳನ್ನು ಒಂದು ವಿಮಾ ಘಟಕವಾಗಿ ವಿಲೀನಗೊಳಿಸಲಾಗುವುದು ಎಂದು ಘೋಷಿಸಿದ್ದರು.
ಈ ಕಂಪನಿಗಳ ಕಳಪೆ ಆರ್ಥಿಕ ಪರಿಸ್ಥಿತಿ ಸೇರಿದಂತೆ ವಿವಿಧ ಕಾರಣಗಳಿಂದ ಅವುಗಳನ್ನು ವಿಲೀನಗೊಳಿಸಲು ಸಾಧ್ಯವಾಗಿರಲಿಲ್ಲ.