ನವದೆಹಲಿ: ಮೇಘಾಲಯದ ನೂತನ ರಾಜ್ಯಪಾಲರಾಗಿ ನಿನ್ನೆ ಅಧಿಕಾರ ಸ್ವೀಕರಿಸಿದ ಮೈಸೂರಿನ ಸಿ.ಎಚ್. ವಿಜಯಶಂಕರ್ ಸೇರಿದಂತೆ ನಾಲ್ವರು ರಾಜ್ಯಗಳ ರಾಜ್ಯಪಾಲರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನವದೆಹಲಿ: ಮೇಘಾಲಯದ ನೂತನ ರಾಜ್ಯಪಾಲರಾಗಿ ನಿನ್ನೆ ಅಧಿಕಾರ ಸ್ವೀಕರಿಸಿದ ಮೈಸೂರಿನ ಸಿ.ಎಚ್. ವಿಜಯಶಂಕರ್ ಸೇರಿದಂತೆ ನಾಲ್ವರು ರಾಜ್ಯಗಳ ರಾಜ್ಯಪಾಲರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಿ.ಎಚ್. ವಿಜಯ ಶಂಕರ್ ಹಾಗೂ ರಾಜಸ್ಥಾನ, ನಾಗಲ್ಯಾಂಡ್, ಗೋವಾ ರಾಜ್ಯಗಳ ರಾಜ್ಯಪಾಲರೊಂದಿಗೆ ಸಂಸತ್ತಿನ ಗೃಹ ಸಚಿವರ ಕಚೇರಿಯಲ್ಲಿ ಪ್ರತ್ಯೇಕವಾಗಿ ಅಮಿತ್ ಶಾ ಸಭೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಮಿತ್ ಶಾ ಕಚೇರಿ ಮಾಹಿತಿ ಹಂಚಿಕೊಂಡಿದೆ. ರಾಜಸ್ಥಾನದ ರಾಜ್ಯಪಾಲ ಹರಿಭಾವು ಬಾಗ್ಡೆ, ನಾಗಾಲ್ಯಾಂಡ್ ರಾಜ್ಯಪಾಲ ಲಾ.ಗಣೇಶನ್, ಮೇಘಾಲಯ ರಾಜ್ಯಪಾಲ ಸಿ.ಹೆಚ್. ವಿಜಯಸಂಕರ್ ಹಾಗೂ ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರು ಗೃಹ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ಅಮಿತ್ ಶಾ ಕಚೇರಿ ಟ್ವೀಟ್ ಮಾಡಿದೆ.