ಪೆರ್ಲ : ಪೆರ್ಲ ಶ್ರೀ ಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವಗ ಸ್ಮಾರ್ಟ್ ಕ್ಲಾಸ್‍ರೂಮ್‍ನ ಉದ್ಘಾಟನೆ ಸೆ. 2ರಂದು ಮಧ್ಯಾಹ್ನ 2ಗಂಟೆಗೆ ಶಾಲೆಯಲ್ಲೊಇ ಜರುಗಲಿರುವುದು.
ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ. ಉದ್ಘಾಟಿಸುವರು. ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ ಜೆ.ಎಸ್, ಉಪಾಧ್ಯಕ್ಷೆ ರಮ್ಲಾ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆ ಪ್ರಬಂಧಕ ಶ್ರೀಕೃಷ್ಣ ವಿಶ್ವಾಮಿತ್ರ, ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೇಶವ ಪ್ರಕಾಶ್ ಎನ್ ಪಾಲ್ಗೊಳ್ಳುವರು.