ಕಾಸರಗೋಡು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಕಾಸರಗೋಡು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕಾಸರಗೋಡು ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವಠಾರದಿಂದ ನಗರದಾದ್ಯಂತ ಪ್ರತಿಭಟನಾ ಮೆರವಣಿಗೆ ನಡೆಯಿತು.
ಹಿಂದೂ ಮುಖಂಡ ಕೆ.ಎನ್ ವೆಂಕಟ್ರಮಣ ಹೊಳ್ಳ, ಬಿಜೆಪಿ ಮುಖಂಡರಾದ ಸುಕುಮಾರ ಕುದ್ರೆಪ್ಪಾಡಿ, ಪ್ರಮಿಳಾ ಮಜಲ್ ಮೊದಲಾದವರು ಪಾಲ್ಗೊಂಡಿದ್ದರು. ವಿಹಿಂಪ, ಭಜರಂಗದಳ, ದುರ್ಗಾವಾಹಿನಿ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ ಕೊನೆಗೊಳಿಸಲು ಅಲ್ಲಿನ ನೂತನ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಲಾಯಿತು.