ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 21 ನೇ ಚಾತುರ್ಮಾಸ್ಯದ ಸಂದರ್ಭ ಆ. 25 ರಂದು ಭಾನುವಾರ ಅಪರಾಹ್ಣ 3.30ಕ್ಕೆ ವಿದ್ವಾನ್ ಸುಬ್ರಹ್ಮಣ್ಯ ಅವಧಾನಿ ಗುಂಡಿಬೈಲು ಇವರಿಂದ ನವಧಾ ಭಕ್ತಿ" ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಲಿದೆ ಎಂದು ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.