ನವದೆಹಲಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದ್ದು, ದೇಶದ ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ನವದೆಹಲಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದ್ದು, ದೇಶದ ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನ ಜನರಿಗಾಗಿ ನಮ್ಮ ಸರ್ಕಾರವು ಕೆಲಸ ಮಾಡುತ್ತದೆ.
ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಐದನೇ ವಾರ್ಷಿಕೋತ್ಸವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದ್ದಾರೆ.
ಸಂವಿಧಾನ ರಚಿಸಿದ ಮಹಾನ್ ವ್ಯಕ್ತಿಗಳ ಆಶಯದೊಂದಿಗೆ ಇಲ್ಲಿನ ಜನರ ಅಭ್ಯುದಾಯಕ್ಕಾಗಿ, ಸಮಾನತೆಯ ದೃಷ್ಟಿಕೋನದಡಿ ಈ ವಿಶೇಷ ಸ್ಥಾನಮಾನವನ್ನು ಹಿಂಪಡೆಯಲಾಯಿತು. ಇದರಿಂದಾಗಿ ಮಹಿಳೆಯರು, ಯುವಕರು, ಬುಡಕಟ್ಟು ಸಮುದಾಯವರಿಗೆ ಭದ್ರತೆ, ಗೌರವ, ಅಭಿವೃದ್ದಿಯ ಆಶಾಕಿರಣ ಮೂಡಿತು ಎಂದು ಮೋದಿ ತಿಳಿಸಿದ್ದಾರೆ.
2019ರ ಆಗಸ್ಟ್ 5ರಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿತ್ತು.