ಕುಂಬಳೆ: ಪೆರ್ಮುದೆ ಲಾರೆನ್ಸ್ ನಗರದ ಸೈಂಟ್ ಡೊಮಿನಿಕ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸೈಂಟ್ ಲಾರೆನ್ಸ್ ದಿ ಮಾರ್ಟಿರ್ ಇಗರ್ಜಿಯ ಧರ್ಮಗುರು ಫಾ. ಹೆರಾಲ್ಡ್ ಡಿಸೋಜ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಸಂದೇಶ ನೀಡಿದರು. ಸಹಾಯಕ ಧರ್ಮಗುರು ವಂ. ಫಾ. ಕ್ಲೋಡ್ ಕೋರ್ಡಾ, ಪುತ್ತಿಗೆ ಪಂಚಾಯಿತಿ ಸದಸ್ಯೆ ಶಾಂತಿಪ್ರಭಾ ಡಿಸೋಜ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕೃಶಾ, ಖದೀಜತ್ ನಿಫಾ ಮಾತನಾಡಿದರು. ಎಲ್‍ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನಗೊಂಡಿತು. ಶಿಕ್ಷಕಿಯರು ದೇಶಭಕ್ತಿ ಗೀತೆ ಹಾಡಿದರು. ಶಿಕ್ಷಕಿ ಲವೀನ ನೊರಿನ್ ರೋಡ್ರಿಗಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.