ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತ ಮಕ್ಕಳ ತಾಯಂದಿರಿಗಾಗಿ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ವಲೀಕೆ ಪಿ.ಸತಿದೇವಿ ಹೇಳಿದರು. ಎಂಡೋಸಲ್ಫಾನ್ ದುಷ್ಪರಿಣಾಮಪೀಡಿತ ಪ್ರದೇಶದ ತಾಯಂದಿರಿಗಾಗಿ ಮಹಿಳಾ ಆಯೋಗವು ಕಾಸರಗೋಡು ಕಲೆಕ್ಟರೇಟ್ ಕಾನ್ಫರೆನ್ಸ್ ಹಾಲ್‍ನಲ್ಲಿ ನಡೆಸಿದ ಸಾರ್ವಜನಿಕ ಅಹವಾಲು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಚರ್ಚೆಯಿಂದ ಹೊರಹೊಮ್ಮುವ ವಿಚಾರಗಳ ಕ್ರೋಢೀಕೃತ ವರದಿಯನ್ನು ಸರ್ಕಾರಕ್ಕೆ ಒದಗಿಸಲಾಗುವುದು. ಎಂಡೋಸಲ್ಫಾನ್ ಬಾಧಿತ ಪ್ರದೇಶಗಳಲ್ಲಿ ಸರ್ಕಾರದ ಯೋಜನೆಗಳ ಸಮರ್ಪಕ ಜಾರಿ ಮತ್ತು ಎಂಡೋಸಂತ್ರಸ್ತ ಮಕ್ಕಳನ್ನು ರಕ್ಷಿಸುವುದು ಸಾರ್ವಜನಿಕ ವಿಚಾರಣೆಯ ಪ್ರಮುಖ ಉದ್ದೇಶವಾಗಿದೆ. ಕಳೆದ ವರ್ಷದಿಂದ ರಾಜ್ಯ ಮಹಿಳಾ ಆಯೋಗದ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಾರ್ವಜನಿಕ ವಿಚಾರಣೆ ನಡೆಸಲಾಗುತ್ತಿದೆ. ಕೆಲಸ ಮತ್ತು ಸಾಮಾಜಿಕ ಜೀವನದ ಎಲ್ಲಾ ವಿಷಯಗಳ ಬಗ್ಗೆ ವಿಶೇಷವಾಗಿ ಚರ್ಚಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ.
ಮಹಿಳಾ ಆಯೋಗದ ಸದಸ್ಯೆ ವಕೀಲೆ ಕುಞËಯಿಷ ಅಧ್ಯಕ್ಷತೆ ವಹಿಸಿದ್ದರು. ಎಂಡೋಸಲ್ಫಾನ್ ಸೆಲ್ ಸಹಾಯಕ ಜಿಲ್ಲಾಧಿಕಾರಿ ಪಿ. ಸುರ್ಜಿತ್, ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಆರ್ಯ ಪಿ. ರಾಜ್ ಸರ್ಕಾರದಿಂದ ನೀಡುತ್ತಿರುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಕೇರಳ ಮಹಿಳಾ ಆಯೋಗದ ಸಂಶೋಧನಾ ಅಧಿಕಾರಿ ಎ.ಆರ್.ಅರ್ಚನಾ ಚರ್ಚೆಗೆ ಚಾಲನೆ ನೀಡಿದರು.