HEALTH TIPS

ಅಯೋಧ್ಯೆ ಸಾಮೂಹಿಕ ಅತ್ಯಾಚಾರ: ಸಂತ್ರಸ್ತೆಗೆ ವೈದ್ಯಕೀಯ ನೆರವು

          ಯೋಧ್ಯೆ: ಅಯೋಧ್ಯೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 12 ವರ್ಷದ ಬಾಲಕಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆಕೆಯನ್ನು ಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

           ಅಯೋಧ್ಯೆಯ ಮಹಿಳಾ ಆಸ್ಪತ್ರೆಯಲ್ಲಿ ಆಕೆಗೆ ಸೂಕ್ತ ಚಿಕಿತ್ಸೆ ನೀಡಲು ಅಗತ್ಯ ಸೌಲಭ್ಯವಿಲ್ಲದ ಕಾರಣ ಬಾಲಕಿಯನ್ನು ಕಿಂಗ್‌ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಸಂಜಯ್ ಜೈನ್ ಮಾಹಿತಿ ನೀಡಿದ್ದಾರೆ.

              ಸಂತ್ರಸ್ತೆಯ ಜತೆಯಲ್ಲಿ ಲಖನೌ ಆಸ್ಪತ್ರೆಗೆ ತೆರಳುವುದಾಗಿ ಜೈನ್‌ ತಿಳಿಸಿದ್ದಾರೆ.

(ಆರೋಪಿ) ಮೊಯಿದ್ ಖಾನ್ ಸಮಾಜವಾದಿ ಪಕ್ಷದ ಸದಸ್ಯರಾಗಿದ್ದು, ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಅವರೊಂದಿಗೆ ಗುರುತಿಸಿಕೊಂಡಿದ್ದಾನೆ. ಕೊಲೆಗಡುಕರಿಗೆ ಹಾಗೂ ಅತ್ಯಾಚಾರಿಗಳನ್ನು ಪೋಷಿಸುವುದು ಸಮಾಜವಾದಿ ಪಕ್ಷದ ಹಳೆ ಹವ್ಯಾಸವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆರೋಪಿಸಿದ್ದಾರೆ.

              ಮೊಯಿದ್ ಖಾನ್ ಮತ್ತು ಆತನ ಸಹಚರ ರಾಜು ಖಾನ್ ಎಂಬುವವರು ಎರಡು ತಿಂಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದರು. ವೈದ್ಯಕೀಯ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries