HEALTH TIPS

ಚಿತ್ರರಂಗದಲ್ಲಿ ಹಕ್ಕುಗಳ ಉಲ್ಲಂಘನೆ: ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಮಧ್ಯ ಪ್ರವೇಶಿಸಿ ವಿವರಣೆ ನೀಡಲು ಮಾನವ ಹಕ್ಕುಗಳ ಆಯೋಗ ಸೂಚನೆ

                 ತಿರುವನಂತಪುರಂ: ಚಿತ್ರೋದ್ಯಮದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮಾನವ ಹಕ್ಕುಗಳ ಆಯೋಗ ಪರಿಶೀಲಿಸಲಿದೆ. ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೋಲೀಸ್ ವರಿಷ್ಠರಿಂದ ವಿವರಣೆ ಕೇಳಲಾಗಿದೆ. 

                   ಸಮಿತಿಯ ವರದಿ ಮತ್ತು ದೂರನ್ನು ವಿವರವಾಗಿ ಮೌಲ್ಯಮಾಪನ ಮಾಡಬೇಕು ಮತ್ತು ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳನ್ನು ವಿವರಿಸಬೇಕು ಎಂದು ಆಯೋಗವು ಕೇಳಿದೆ.

                      ಹೇಮಾ ಸಮಿತಿ ವರದಿಯಲ್ಲಿ ಉಲ್ಲೇಖಿಸಿರುವ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಕಣ್ಣೂರು ಮೂಲದ ವಕೀಲ ವಿ ದೇವದಾಸ್ ಅವರು ಸಲ್ಲಿಸಿರುವ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಮಾಧ್ಯಮಗಳು ಬಿಡುಗಡೆ ಮಾಡಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮತ್ತು ಆಯೋಗಕ್ಕೆ ಬಂದಿರುವ ದೂರಿನ ಆಧಾರದ ಮೇಲೆ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಕೆ.ಬೈಜುನಾಥ್ ಅವರು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಗುರುತಿಸಿರುವರು. 

                   ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಪೋಲೀಸ್ ಮುಖ್ಯಸ್ಥರು ಸಮಿತಿಯ ವರದಿ ಮತ್ತು ದೂರನ್ನು ವಿವರವಾಗಿ ಮೌಲ್ಯಮಾಪನ ಮಾಡಬೇಕಾಗುತ್ತದೆ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ವಾರಗಳಲ್ಲಿ ವಿವರಣೆಯನ್ನು ಸಲ್ಲಿಸಬೇಕು. ಈ ಪ್ರಕರಣವನ್ನು ಸೆಪ್ಟೆಂಬರ್‍ನಲ್ಲಿ ಕಣ್ಣೂರು ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಲಾಗುವುದು.

               ಏತನ್ಮಧ್ಯೆ, ಹೇಮಾ ಸಮಿತಿ ವರದಿಯ ಆಧಾರದ ಮೇಲೆ ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ತರಲು ಸಮಗ್ರ ತನಿಖೆಯನ್ನು ಘೋಷಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷದ ನಾಯಕರು ಈಗಾಗಲೇ ಮುಖ್ಯಮಂತ್ರಿ ಮತ್ತು ಚಲನಚಿತ್ರ ಮತ್ತು ಸಂಸ್ಕøತಿ ಸಚಿವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತರು ನೀಡಿರುವ ಹೇಳಿಕೆಗಳು ಹಾಗೂ ಸಲ್ಲಿಸಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಪತ್ರದಲ್ಲಿ ಆಗ್ರಹಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries