ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣಾ ತಕರಾರು ಸಂಬAಧಿ ಅರ್ಜಿಯ ವಿಚಾರಣೆಯನ್ನು ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶರು ಆ. ೧೭ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಹಾಗೂ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ ಸೇರಿದಂತೆ ಬಿಜೆಪಿಯ ಆರುಮಂದಿಯನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಸುಂದರ ಅವರು, ತನ್ನನ್ನು ನಾಮಪತ್ರ ಹಿಂತೆಗೆಯಲು ಎರಡುವರೆ ಲಕ್ಷ ರೂ. ಹಾಗೂ ಬೆಲೆಬಾಳುವ ಮೊಬೈಲ್ ನೀಡುವುದಾಗಿ ಆಮಿಷವೊಡ್ಡಿರುವ ಬಗ್ಗೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ ಕ್ರೆöÊಂ ಬ್ರಾಂಚ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.
ಪ್ರಕರಣ ವಾಸ್ತವ ವಿರುದ್ಧವಾಗಿದ್ದು, ಕಾನೂನು ಪ್ರಕಾರ ನ್ಯಾಯಾಲಯದಲ್ಲಿ ನೆಲೆನಿಲ್ಲದು. ಇದರಿಂದ ಪ್ರಕರಣ ರದ್ದುಗೊಳಿಸುವಂತೆ ಆಗ್ರಹಿಸಿ ಕೆ. ಸುರೇಂದ್ರನ್ ಸೇರಿದಂತೆ ಇತರ ಆರು ಮಂದಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ಪರಿಗಣಿಸುವ ಮಧ್ಯೆ ವಿಚಾರಣೆ ಮುಂದೂಡಿ ಆದೇಶಿಸಿದೆ.