ನವದೆಹಲಿ: ರೈತರು ಬೆಳೆದ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯ ಅಡಿಯಲ್ಲಿ ಖರೀದಿಸಿ ಅವರಿಗೆ ನ್ಯಾಯ ಒದಗಿಸಬೇಕು ಎಂದು ವಿರೋಧ ಪಕ್ಷದ ಸಂಸದರು ಗುರುವಾರ ಸಂಸತ್ ಆವರಣದಲ್ಲಿ ಪ್ರತಿಭಟಿಸಿದರು.
ನವದೆಹಲಿ: ರೈತರು ಬೆಳೆದ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯ ಅಡಿಯಲ್ಲಿ ಖರೀದಿಸಿ ಅವರಿಗೆ ನ್ಯಾಯ ಒದಗಿಸಬೇಕು ಎಂದು ವಿರೋಧ ಪಕ್ಷದ ಸಂಸದರು ಗುರುವಾರ ಸಂಸತ್ ಆವರಣದಲ್ಲಿ ಪ್ರತಿಭಟಿಸಿದರು.
ತೃಣಮೂಲ ಕಾಂಗ್ರೆಸ್ (ಟಿಎಂಸಿ), ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ- ಶರದ್‌ಬಣ) ಶಿವಸೇನಾ (ಉದ್ಧವ್ ಬಣ)ದ ಸಂಸದರು ಸಂಸತ್‌ನ 'ಮಕರ್‌ದ್ವಾರ'ದ ಮುಂಭಾಗದಲ್ಲಿ ಧರಣಿ ನಡೆಸಿದರು.
ತರಕಾರಿಯ ಹಾರ ಧರಿಸಿದ ಸಂಸದರು, 'ರೈತರು ಬೆಳೆದ ಬೆಳೆಗಳಿಗೆ ಎಂಎಸ್‌ಪಿ ನೀಡಿ', 'ರೈತರಿಗೆ ಅನ್ಯಾಯ ಮಾಡಬೇಡಿ' ಎಂದು ಘೋಷಣೆ ಕೂಗಿದರು.
'ತೆಲುಗು ದೇಶಂ (ಟಿಡಿಪಿ) ಹಾಗೂ ಜೆಡಿಯು ಪಕ್ಷಕ್ಕೆ ಬಿಜೆಪಿ ಕನಿಷ್ಠ ಬೆಂಬಲ ನೀಡಿದಂತೆಯೇ, ರೈತರ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸಬೇಕು. ಇದಕ್ಕಾಗಿಯೇ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ' ಎಂದು ಶಿವಸೇನಾ (ಉದ್ಧವ್ ಬಣ) ಸಂಸದೆ ಪ್ರಿಯಾಂಕ ಚತುರ್ವೇದಿ ಒತ್ತಾಯಿಸಿದರು.
'ಮಹಾರಾಷ್ಟ್ರದಲ್ಲಿ ಈರುಳ್ಳಿ ಮೇಲೆ ವಿಧಿಸಿರುವ ರಫ್ತು ನಿಷೇಧವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ' ಎಂದು ತಿಳಿಸಿದರು.
'ರೈತರಿಗೆ ನ್ಯಾಯ ಒದಗಿಸುವುದು ನಮ್ಮ ಉದ್ದೇಶವಾಗಿದ್ದು, ಅದಕ್ಕಾಗಿ ಧ್ವನಿ ಎತ್ತುತ್ತಿದ್ದೇವೆ' ಎಂದು ಸಂಸದರು ತಿಳಿಸಿದರು.
ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಗೊಳಿಸುವಂತೆ ಆಗ್ರಹಿಸಿ ವಿರೋಧ ಪಕ್ಷದ ಸಂಸದರು ಗುರುವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು