ಕಾಸರಗೋಡು: ಚೆರ್ಕಳದಿಂದ ಚಟ್ಟಂಚಾಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ ಷಟ್ಪಥ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಅಪಾಯ ಸೃಷ್ಟಿಸುತ್ತಿದೆ ಎಂದು ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಬಿರುಸಿನ ಮಳೆಗೆ ಚೆರ್ಕಳದಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಅಭಿಪ್ರಾಯ ವ್ಯಕ್ತಪಡಿಸಿದರು. ಕೇವಲ ಒಂದು ಇಂಚು ದಪ್ಪದ ಮಣ್ಣಿನ ಗೋಡೆಗಳಿಗೆ ಸಿಮೆಂಟ್ ಮತ್ತು ಎಂಸ್ಯಾಂಡ್ ಮಿಶ್ರಣ ಲಗತ್ತಿಸಿರುವುದು ಬಿಟ್ಟರೆ, ಇಲ್ಲಿ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಮಾಡಿಲ್ಲ. ಇದು ನಿರ್ಮಾಣಕಾರ್ಯದಲ್ಲಿನ ಲೋಪವಾಗಿದ್ದು, ಈ ಬಗ್ಗೆ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಚೆರ್ಕಳದಿಂದ ಚಟ್ಟಂಚಾಲ್ ವರೆಗಿನ ರಸ್ತೆಯ ಎರಡೂ ಬದಿಯಲ್ಲಿ ಸರ್ವೀಸ್ ರಸ್ತೆಗಳಿಲ್ಲ. ಇಲ್ಲಿನ ಜನರು ಯಾವ ರೀತಿ ಸಂಚರಿಸಬೇಕಲು ಎಂಬ ಎಂಬ ಬಗ್ಗೆ ಅಧಿಖಾರಿಗಲು ನಿರ್ಧಾರ ಕೈಗೊಳ್ಳಬೇಕು ಡಂದೂ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಅಧಿಖಾರಿಗಳನ್ನು ಪ್ರಶ್ನಿಸಿದ್ದಾರೆ.
ಸಂಸದರ ಭೇಟಿ ಹಿನ್ನೆಲೆಯಲ್ಲಿ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಸಂಸದರಿಗೆ ತಮ್ಮ ದೂರುಗಳನ್ನು ಸಲ್ಲಿಸಿದರು.
ಚಿತ್ರ: ಭೂಕುಸಿತ ಪ್ರದೇಶಕ್ಕೆ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.