ನವದೆಹಲಿ: ತುಳು ಮತ್ತು ಇತರ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ವಿಷಯದಲ್ಲಿ ಜನರ ಭಾವನೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅರಿವಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಂಗಳವಾರ ಲೋಕಸಭೆಯಲ್ಲಿ ಹೇಳಿದರು.

ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್ ಚೌಟ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 'ಜನರ ಭಾವನೆಗಳು ಮತ್ತು ಇತರ ಮಾನದಂಡಗಳ ಆಧಾರದ ಮೇಲೆಯೇ ಇಂಥ ಮನವಿಗಳನ್ನು ಪರಿಗಣಿಸಲಾ
'ಭಾರತದ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಒಟ್ಟು 22 ಭಾಷೆಗಳನ್ನು ಸೇರಿಸಲಾಗಿದೆ. ತುಳು ಸೇರಿದಂತೆ ಇತರ ಭಾಷೆಗಳನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಸಂಬಂಧ ಕಾಲದಿಂದ ಕಾಲಕ್ಕೆ ಮನವಿ ಬರುತ್ತಿವೆ' ಎಂದು ಹೇಳಿದರು.
'ಭಾಷೆಗಳನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ನಿರ್ದಿಷ್ಟ ಮಾನದಂಡಗಳಿಲ್ಲ. ಭಾಷೆ, ಉಪಭಾಷೆಗಳ ಬೆಳವಣಿಗೆಯು ಒಂದು ನಿರಂತರ ಪ್ರಕ್ರಿಯೆಯಾಗಿದ್ದು, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಹಾಗೂ ರಾಜಕೀಯ ಬೆಳವಣಿಗೆಗಳಿಂದ ಪ್ರೇರಿತವಾಗಿರುತ್ತದೆ. ಹೀಗಾಗಿ ಭಾಷೆಗಳನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಮಾನದಂಡಗಳನ್ನು ನಿಗದಿಪಡಿಸಲು ಸಾಧ್ಯವಾಗುವುದಿಲ್ಲ. ಈ ಹಿಂದೆ ಇದಕ್ಕಾಗಿ ಪಾಹ್ವಾ (1996) ಮತ್ತು ಸೀತಾಕಾಂತ ಮೊಹಾಪಾತ್ರ (2003) ಸಮಿತಿಗಳನ್ನು ನೇಮಿಸಲಾಗಿತ್ತಾದರೂ, ಒಂದು ನಿರ್ಣಯಕ್ಕೆ ಬರಲು ಅವುಗಳಿಂದ ಸಾಧ್ಯವಾಗಲಿಲ್ಲ' ಎಂದರು.